ಬೆಂಗಳೂರು: ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕೂಡಲೇ ಮುಷ್ಕರ ಕೈಬಿಟ್ಟು ಸಾರಿಗೆ ಸಚಿವರ ಜೊತೆ ಚರ್ಚೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರಿಗೆ ಸಲಹೆ ಸೂಚನೆಗಳನ್ನು ನೀಡಿದ್ದೇನೆ.

ಸಾರಿಗೆ ಸಚಿವರು ಸಹ, ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರೈತ ಸಂಘದ ಮಖಂಡರಾದ ಕೋಡಿಹಳ್ಳಿ ಚಂದ್ರಶೇಖರ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಮತ್ತು ರಾಜ್ಯದ ವಿವಿದೆಡೆ ಕೆಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ ಸಾರ್ವಜನಿಕ ಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಿ ಕರ್ತರಾಗಿರುತ್ತಾರೆ. ಅಲ್ಲದೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ ಅವರು ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯವಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುತ್ತೇನೆ.

Leave a Reply

Your email address will not be published. Required fields are marked *

You May Also Like

ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ!

ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ.

ಕೆಎಎಸ್ ಅಧಿಕಾರಿ ಸುಧಾ ಅವರ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಎಷ್ಟು ಗೊತ್ತಾ?

ಬೆಂಗಳೂರು : ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಬರೋಬ್ಬರಿ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.