ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ

ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಎಲೆಸ್ಟ್‌ ಪ್ರೈ. ಲಿ. ಹುಬ್ಬಳ್ಳಿ-ಧಾರವಾಡದಲ್ಲಿ 6339 ಕೋಟಿ ರೂ. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯ ಇರುವ ಲಿಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದ್ದು, ಇದರಿಂದ 1804 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಹ್ಯುನೆಟ್‌ ಪ್ರೈ. ಲಿ, ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ 1825 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2210 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆ

ಮಿರಾಕ್ಯುಲಮ್‌ ಗ್ರೀನ್‌ ಪವರ್‌ ಪ್ರೈ.ಲಿ, ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 1290 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2820 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಸನಾಲಿ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 2,950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 5640 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ.ರೇವಣ್ಣಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಹಳದಿ ಕತ್ತುಪಟ್ಟಿಯ ತೋಳದ ಹಾವು ಪತ್ತೆ

ತೋಳದ ಹಾವು ಕೆಲವು ಪ್ರದೇಶಗಳಲ್ಲಿ ಸಾಮಾನ್ಯ, ಆದರೆ ಹಳದಿ ಕತ್ತು ಪಟ್ಟಿಯ ತೋಳದ ಹಾವು ಗದಗ್ ನ ರೋಣದಂತಹ ಬಿಸಿಲೂರಿನಲ್ಲಿ ಪತ್ತೆಯಾಗಿದ್ದು, ಸಂಶೋಧಕರಲ್ಲಿ ಅಚ್ಚರಿ ಮೂಡಿಸಿದೆ.

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಲಾಟರಿಯಿಂದ ಕಾಂಗ್ರೆಸ್ ಬೆಂಬಲಿತರಿಗೆ ಒಲಿದು ಬಂದ ಕುರ್ಚಿ!

ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.