ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ

ಎಲೆಸ್ಟ್‌ ಪ್ರೈ ಲಿ. ಹುಬ್ಬಳ್ಳಿ-ಧಾರವಾಡದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆ ಘಟಕ ಆರಂಭಿಸಲು, 14255 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 867 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಎಲೆಸ್ಟ್‌ ಪ್ರೈ. ಲಿ. ಹುಬ್ಬಳ್ಳಿ-ಧಾರವಾಡದಲ್ಲಿ 6339 ಕೋಟಿ ರೂ. ಹೂಡಿಕೆಯೊಂದಿಗೆ ಎಲೆಕ್ಟ್ರಿಕ್‌ ವಾಹನ ತಯಾರಿಕೆಗೆ ಅಗತ್ಯ ಇರುವ ಲಿಥಿಯಂ ಅಯಾನ್‌ ಸೆಲ್‌ ಮತ್ತು ಬ್ಯಾಟರಿ ಉತ್ಪಾದನೆ ಘಟಕ ಸ್ಥಾಪಿಸಲಿದ್ದು, ಇದರಿಂದ 1804 ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

ಹ್ಯುನೆಟ್‌ ಪ್ರೈ. ಲಿ, ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕ್‌ ವಾಹನ ತಯಾರಿಕೆ, ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ ಆರಂಭಕ್ಕೆ 1825 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2210 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆ

ಮಿರಾಕ್ಯುಲಮ್‌ ಗ್ರೀನ್‌ ಪವರ್‌ ಪ್ರೈ.ಲಿ, ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 1290 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 2820 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ. ಸನಾಲಿ ಪವರ್‌ ಪ್ರೈ.ಲಿ. ಜಗಳೂರಿನಲ್ಲಿ ಪವನ, ಸೌರ ವಿದ್ಯುತ್‌ ಯೋಜನೆಗೆ 2,950 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ 5640 ಉದ್ಯೋಗ ಸೃಷ್ಟಿ ನಿರೀಕ್ಷೆ ಇದೆ.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ.ರೇವಣ್ಣಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?

ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.