ಹಾವೇರಿ: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಹಿನ್ನೆಲೆ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದ ಅಭ್ಯರ್ಥಿ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿ ಪುಟ್ಟಪ್ಪ, ಮತ ಎಣಿಕೆ ಕೇಂದ್ರದಲ್ಲಿ ತಲೆತಿರುಗಿ ಬಿದ್ದ ಘಟನೆ ನಡೆದಿದೆ. ಪುಟ್ಟಪ್ಪ ಮಾಯಣ್ಣನವರ ಹಂಸಭಾವಿ ಗ್ರಾಮ ಪಂಚಾಯತಿ ಅಭ್ಯರ್ಥಿಯಾಗಿದ್ದು, ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕಾರಗಿ ಗ್ರಾಮದವರಾಗಿದ್ದಾರೆ. ಕೂಡಲೇ ಚುನಾವಣಾ ಸಿಬ್ಬಂದಿ ಅಂಬ್ಯುಲನ್ಸ್ನಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿ ಅಸ್ವಸ್ಥ
