ಬೆಂಗಳೂರು: ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡು ಹಿಡಿಯಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಹೋಮಿಯೋಪತಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೊರೊನಾ ನಿವಾರಣೆಗೆ ಹೋಮಿಯೋಪತಿ ಪದ್ಧತಿಯಲ್ಲೂ ಔಷಧಿ ಆವಿಷ್ಕಾರ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

ಹೋಮಿಯೋಪತಿ ಪದ್ಧತಿ ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂಬ ತತ್ವವನ್ನು ಆಧರಿಸಿದೆ. ಟೈಫಾಯಿಡ್ ಬಂದಾಗಲೂ ಹೋಮಿಯೋಪತಿ ಬಳಕೆಯಾಗಿತ್ತು. ಇಂತಹ ಪದ್ಧತಿಗೆ ಉತ್ತೇಜನ ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ ಗೆ ವಿಶೇಷ ಒತ್ತು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬ ಆಯುಷ್ ವೈದ್ಯರನ್ನು ನಿಯೋಜಿಸಲು ತೀರ್ಮಾನಿಸಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಅವ್ವನ ಮಾತು ಎಚ್ಚರಿಕೆ ಗಂಟೆಯಿದ್ದಂತೆ

ಬದುಕಿನುದ್ದಕ್ಕೂ ಸದಾ ಅವ್ವ ನೆನಪಾಗುತ್ತಲೇ ಇರುತ್ತಾಳೆ. ಅವಳ ಮಾತು ಅಂದರೆ ವೇದ ವಾಕ್ಯವಿದ್ದಂತೆ. ಅದು ಸತ್ಯ ಅಂದರೆ ಸತ್ಯ ಅಷ್ಟೆ. ಏಕೆಂದರೆ ಸತ್ಯ ಯಾವತ್ತೂ ಸತ್ಯ! ಅದಕ್ಕೆ ಇನ್ನೊಂದು ಪರ್ಯಾಯವೇನೂ ಇರುವುದಿಲ್ಲ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.

ಅನಾಮಧೇಯ ವ್ಯಕ್ತಿಯ ಶವಪತ್ತೆ: ಗುರುತು ಪತ್ತೆಗೆ ಮನವಿ

ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಪಟ್ಟಣದ…