ದೆಹಲಿ (ಸಿಂಘು ಗಡಿ): ರೈತರ ವಿರುದ್ಧ ‘ನಾಗ’ಎಂಬ ಕಂಪನಿ ನಿಂತಿದೆ. ನಾಗ ಎಂದರೆ“ನರೇಂದ್ರ, ಅಮಿತ್‌, ಗೌತಮ್‌, ಅದಾನಿ’ ಹೀಗೆ ಹೇಳಿದ್ದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಹರ್ಷಾನಂದ್‌ ಜಿ ಮಹರಾಜ್‌, ‘ಮಾಸ್‌ ಮೀಡಿಯಾ ಫೌಂಡೇಷನ್‌’ ಪ್ರತಿನಿಧಿಯೊಂದಿಗೆ ಮಾತಾಡುತ್ತಾ, ಕಾರ್ಪೋರೇಟ್‌ ಶಕ್ತಿಗಳನ್ನು ರೈತ ವಿರೋಧಿ ನಿಲುವು ತಳೆದಿರುವ ಬಗ್ಗೆ ಪ್ರತಿಕ್ರಿಯಿಸಿದರು.

“ರೈತ ಭಾರತದ ಆತ್ಮ. ಇಂದು ಆ ರೈತ ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ ನಡೆಸುತ್ತಿದ್ದಾನೆ. ಜಗತ್ತಿನ ಎಲ್ಲ ವಸ್ತುಗಳನ್ನು ಮಾರುವವನು ನಿರ್ಧಾರ ಮಾಡುತ್ತಾನೆ. ಆದರೆ ರೈತನ ಫಸಲಿನ ಬೆಲೆಯನ್ನು ಖರೀದಿಸುವವನು ನಿರ್ಧರಿಸುತ್ತಾನೆ” ಬೇಸರ ವ್ಯಕ್ತಪಡಿಸಿದರು.

ನಾವು ಈಸ್ಟ್‌ ಇಂಡಿಯಾ ಕಂಪನಿಯನ್ನು ನೋಡಿದ್ದೇವೆ. ಅವರು ಹೇಗೆ ರಕ್ತ ಹೀರುತ್ತಿದ್ದರು ಎಂಬುದನ್ನು ನೋಡಿದ್ದೇವೆ. ಅದೇ ಪರಿಸ್ಥಿತಿ ಇಂದೂ ಇದೆ. ಈ ಪರಿಸ್ಥಿತಿಯನ್ನು ಬದಲಿಸುವುದಕ್ಕಾಗಿಯೇ ಪ್ರಕೃತಿಯೇ ಈ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನ ಸಂಪೂರ್ಣ ಮಾನವ ಕುಲಕ್ಕೆ ಪಾಠವಾಗಲಿದೆ. ಸೇವೆಯೊಂದಿಗೆ ಒಂದು ಆಂದೋಲನವನ್ನು ಹೇಗೆ ನಡೆಸಬಹುದು, ಹೇಗೆ ಜಯವನ್ನು ರೂಪಿಸಬಹುದು ಎಂಬುದನ್ನು ಕಲಿಸಿಕೊಡಲಿದೆ ಎಂಬ ವಿಶ್ವಾಸ ನನ್ನದು. -ಹರ್ಷಾನಂದ್‌ ಜಿ ಮಹಾರಾಜ್‌

ಈ ಚಿತ್ರಣವನ್ನು ಬದಲಿಸುವುದು ಈ ಸಮಯದ ಅಗತ್ಯ. ಆದರೆ ರೈತರಿಗೆ ಮುಖಾಮುಖಿಯಾಗಿರುವುದು ಒಂದು ಖಾಸಗಿ ಕಂಪನಿ. ಅದನ್ನು ನಾನು ನಾಗ ಎಂದು ಕರೆಯುತ್ತೇನೆ. ನಾಗ ಎಂದರೆ, ನರೇಂದ್ರ, ಅಮಿತ್‌, ಗೌತಮ್‌, ಅದಾನಿ. ಸರ್ಕಾರ ಎಂಬುದು ಇದ್ದಿದ್ದರೆ, ರೈತರ ಜೊತೆಗೆ ಕೂತು ಮಾತನಾಡುತ್ತಿತ್ತು. ಆದರೆ ಇಂದು ವಿಶಾಲ ಆಕಾಶದ ಕೆಳಗೆ ಅಸಂಖ್ಯ ರೈತರು ಸೇರಿದ್ದಾರೆ. ಈ ಚಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದಾರೆ. ಇದಾವುದೂ ಖಾಸಗಿ ಕಂಪನಿಯವರಿಗೆ ತಟ್ಟುತ್ತಿಲ್ಲ. ಅಂತಹ ಸಂವೇದನೆ ಅವರಿಗೆ ಇರುವುದೂ ಇಲ್ಲ” ಎಂದರು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)

Leave a Reply

Your email address will not be published. Required fields are marked *

You May Also Like

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಸೋಶಿಯಲ್ ಮಿಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ ಗುಲಾಬಿ ಬಣ್ಣದ ಚೂಡಿದಾರ ಧರಿಸಿದ ಯುವತಿ

ರೊಟ್ಟಿ ಮಾಡುತ್ತ ಕುಳುತಿರುವ ಯುವತಿಯೋರ್ವಳು ಈಗ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಯಾಗಿ ಮಿಂಚುತ್ತಿದ್ದಾಳೆ.

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ಕೊರೊನಾಗೆ ಜಗತ್ತಿನಲ್ಲಿ ಇಲ್ಲಿಯವರೆಗೂ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ಜಗತ್ತಿನಲ್ಲಿ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇಲ್ಲಿಯವರೆಗೂ 2.33 ಲಕ್ಷ ಜನರು ಇದಕ್ಕೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.