ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.

ಪಟ್ಟಣದ ಗದಗ ರಸ್ತೆ ಬಳಿಯ ಚರಂಡಿ ಪಕ್ಕದಲ್ಲಿ ಅನಾಮಧೇಯ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದನು. ಇದನ್ನು ಕಂಡ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಪೊಲೀಸರು ಧಾವಿಸಿ, ವ್ಯಕ್ತಿಯನ್ನು ಚಿಕಿತ್ಸೆಗೆಂದು ಗಜೇಂದ್ರಗಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾಗಿಸಿದ್ದಾರೆ. ಆದರೆ ಅನಾಮಧೇಯ ವ್ಯಕ್ತಿ ಗದಗ ಜಿಲ್ಲಾಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾನೆ.

ಅಂದಾಜು 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿಯ ವಿಳಾಸದ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ, ತಕ್ಷಣ ಗಜೇಂದ್ರಗಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಗಜೇಂದ್ರಗಡ ಪೊಲೀಸ್ ಠಾಣೆ ತಿಳಿಸಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…

ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಸಹಾಯಧನ

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಚೆಕ್ ಡ್ಯಾಂ ಕಾಮಗಾರಿ ನಿಲ್ಲಿಸುವಂತೆ ಹೈಕೋರ್ಟ್ ತಡೆ

ವರದಿ: ವಿಠ್ಠಲ ಕೆಳೂತ್ ಮಸ್ಕಿ: ತಾಲೂಕಿನ ದಿಗ್ಗನಾಯಕನಭಾವಿ ಹತ್ತಿರದ ಹಿರೇ ಹಳ್ಳದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ…

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.