ಗದಗ: ಪೂರ್ಣಾವಧಿಗೆ ಬಿ.ಎಸ್.ಯಡಿಯೂರಪ್ಪ ಅವ್ರೇ ಸಿಎಂ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು.
ಗದಗನಲ್ಲಿ ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿ, ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಬಾಕಿ ಉಳಿದಿದ್ದು, ಯಡಿಯೂರಪ್ಪ ಅವ್ರೇ ಅವಧಿ ಪೂರ್ಣಗೊಳ್ಳುವವರೆಗೆ ಸಿಎಂ ಆಗಿರುತ್ತಾರೆ. ಹೀಗಾಗಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಪ್ರತಿಕ್ರಿಯಿಸಿದರು.
ಸಚಿವ ಸಂಪುಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಈಗಾಗಲೇ ಸಿಎಂ ಈ ಬಗ್ಗೆ ಹೇಳಿದ್ದಾರೆ. ಇನ್ನು ಎರಡು ದಿನ ಕಾಯಿರಿ. ಯಾವುದೇ ಗೊಂದಲವಿಲ್ಲದೇ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದರು.
