ಲಕ್ಷ್ಮೇಶ್ವರ: ಸರಕಾರದ ಮೂಲಕ ಅನುದಾನ ತಂದು ಎಲ್ಲಾ ನಾಗರಿಕರಿಗೂ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು, ತಾಲೂಕಿನ ಬಾಲೇಹೊಸೂರಿನ ಪ್ರಗತಿ ಕಾಲೋನಿಯಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಈಗಾಗಲೇ ಗ್ರಾಮದ ಎಲ್ಲಡೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಚರಂಡಿ ವ್ಯವಸ್ಥೆ, ಸಮರ್ಪಕವಾಗಿದ್ದು ಇನ್ನೂ ಹೆಚ್ಚಿನ ಮಟ್ಟದಲ್ಲಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ಕುರಿತಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡುವಂತೆ ತಿಳಿಸಲಾಗಿದೆ.

ಯಾವುದೇ ಹಂತದಲ್ಲೂ ಕಾಮಗಾರಿಯ ಗುಣಮಟ್ಟದ ಕಳಪೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಫಕ್ಕೀರೇಶ ಹುಲ್ಲೂರ, ದೇವಣ್ಣ, ಮಲ್ಲೇಶ, ಬಸವರಾಜ ಹಿರೇಕೆರಿ, ಶಿವರಾಜ, ಫಕ್ಕಿರೇಶ ಕಟ್ಟಿಮನಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245…

ಗದಗ: ನಗರಾಭಿವೃದ್ಧಿ ಕೋಶ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಸ್ಟಡಿಗೆ ನೀಡಿದ ಕೋರ್ಟ್!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಕಣ್ಮನ ಸೆಳೆದ ಗೊಂಬೆಗಳ ಕುಣಿತ- ಗಣೇಶ ವಿಸರ್ಜನೆ ರಂಗು…!

ವರದಿ: ಗುಲಾಬಚಂದ ಜಾಧವ ಉತ್ತರಪ್ರಭ ಸುದ್ದಿಆಲಮಟ್ಟಿ: ಬ್ರಹತ್ತಾಕಾರದ ರಂಗು ರಂಗಿನ ಗೊಂಬೆಗಳ ನಲಿದಾಟ. ಹಲಿಗೆ ವಾದ್ಯ…