ಗದಗ: ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ಇಲ್ಲಿನ ಕೆವಿಜಿ(ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್) ವ್ಯವಸ್ಥಾಪಕ ಹನಮಂತಪ್ಪ ಅವರ ಮನೆಗೆ ‌ನುಗ್ಗಿದ ನಾಗರಾಜ್ ಚಿಗರಿ ಹಾಗೂ ನವೀನಕುಮಾರ ಕಡೆಮನಿ ಹಣ ಡ್ರಾ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾರಂತೆ. ಜ.15 ರಂದು ಈ ಘಟನೆ ನಡೆದಿತ್ತು. ಈ ಬಗ್ಗೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ವ್ಯವಸ್ಥಾಪಕ ಹನಮಂತಪ್ಪ ದೂರು ಕೂಡ ದಾಖಲಿಸಿದ್ದರು. ಆದರೆ ಬೇಲ್ ಮೇಲೆ ಹೊರಬಂದ ಆರೋಪಿ ನವೀನಕುಮಾರ ಕಡೆಮನಿ ಮತ್ತೆ ಬ್ಯಾಂಕಿಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಈ ವೇಳೆ ಸಿಬ್ಬಂದಿಗಳು ಜಗಳ ಬಿಡಿಸಲು ಮುಂದಾದಾಗ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇನ್ನು ಈ ವೇಳೆ ಮ್ಯಾನೇಜರ್ ಇದ್ದ ಕಡೆ ಕುರ್ಚಿ ಎತ್ತಿ ಹಾಕಿದ್ದರಿಂದ ಬ್ಯಾಂಕ್ ನ ಗಾಜುಗಳು ಪುಡಿಯಾದವು. ಅಷ್ಟಕ್ಕೇ ಸುಮ್ಮನಾಗದ ಆರೋಪಿ‌ ನವೀನಕುಮಾರ, ಖಾತೆಯಲ್ಲಿನ ಹಣ ಈಗಲೇ ಡ್ರಾ ಮಾಡಿಕೊಡುವಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮ್ಯಾನೇಜರ್ ಹನುಮಂತಪ್ಪ ಅವರ ದೂರಿನ ಅನ್ವಯ ಆರೋಪಿ ನವೀನಕುಮಾರನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿ ಕೋಳಿಗಾಗಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ

ಕ್ವಾರಂಟೈನ್ ಕೇಂದ್ರದಲ್ಲಿ ತಮಗೆ ಚಿಕನ್ ಕೊಡಲಿಲ್ಲ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ರೋಣ ಮತಕ್ಷೆತ್ರದ ಒಂದನೆ ಸುತ್ತಿನ ಅಂಚೆ ಮತ ಎಣಿಕೆ…!

ಉತ್ತರಪ್ರಭ ಸುದ್ದಿ ಗದಗ:ಇಂದು ವಿಧಾನಸಭಾ ಚುನಾವಣೆಯ ಮತ ಎಣಕೆ ಶುರುವಾಗಿದ್ದು, ರೋಣ ಮತಕ್ಷೇತ್ರದ ಮೊದಲನೆ ಸುತ್ತು…