ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಶಶಿಕಲಾ ನಟರಾಜನ್ ಇಂದು ಜೈಲುಶಿಕ್ಷೆ ಪೂರ್ಣಗೊಳಿಸಿ ಬಿಡುಗಡೆಯಾಗಲಿದ್ದಾರೆ.

ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.

ಅವರ ಜೊತೆ ಆಪ್ತೆ ಇಳವರಸಿ ಮತ್ತು ಸೋದರ ಸಂಬAಧಿ ಸುಧಾಕರ್ ಕೂಡ ಬಿಡುಗಡೆಯಾಗಲಿದ್ದು, ಜೈಲ್ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಶಶಿಕಲಾ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಮಹಾಶಕ್ತಿ ಕೇಂದ್ರ ಮುಖಂಡರು ಬಿಜೆಪಿಗೆ ಶಕ್ತಿ: ಪ್ರತಾಪಗೌಡ

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಬಳಿಕ ಮಾತನಾಡಿ, ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಗುರಿ ನಮ್ಮದಾಗಬೇಕು, ಎದುರಾಳಿ ಮುಖಂಡರ ಪ್ರಭಾವ ಇರುವ ಬೂತ್ ಗಳಲ್ಲಿ ಬಿಜೆಪಿ ಲೀಡ್ ಮಾಡಿ ತೋರಿಸಬೇಕು. ಈ ನಿಟ್ಟಿನಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕೆಲಸ ನಿರ್ವಹಿಸಬೇಕೆಂದು ಹೇಳಿದರು.

ಗದಗ ಜಿಲ್ಲೆ : ನರೇಗಾದಲ್ಲಿ ಬಿಎಫ್‌ಟಿ ಹುದ್ದೆಗೆ ಅರ್ಜಿ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೋಂಕು: ಇಂದು 4120 ಪಾಸಿಟಿವ್ , ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…