ಬೆಂಗಳೂರು: ಮಹಾಮಾರಿ ಕರೊನಾ ವೈರಸ್ನಿಂದ ಉಂಟಾದ ಕಠಿಣ ಪರಿಸ್ಥಿತಿನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶ್ವಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.
ಏಳು ದಿನಗಳ ವಿಧಾನಮಂಡಲ ಅಧಿವೇಶದ ಮೊದಲ ದಿನದಂದು ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು ಕೋವಿಡ್ ವಾರಿಯರ್ಸ್ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕೋವಿಡ್ನಿಂದ ಮೃತಪಟ್ಟವರಿಗೆ ಸರ್ಕಾರ ೩೦ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೋವಿಡ್ ರೋಗಿಗಳಿಗೆ ಸರ್ಕಾರದಿಂದ ೨೪೮ ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಸುಮಾರು ೧.೩೬ ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎಂದು ಸರ್ಕಾರವನ್ನು ಕಾರ್ಯವನ್ನು ರಾಜ್ಯಪಾಲ ವಜುಭಾಯಿ ವಾಲಾ ಕೊಂಡಾಡಿದರು. ಬೇಳೆಕಾಳುಗಳ ಉತ್ಪಾದನೆಯಲ್ಲಿ ಪ್ರಥಮ ಹಾಗೂ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ದೇಶದ ಮಾಹಿತಿ ತಂತ್ರಜ್ಞಾನಕ್ಕೆ ಶೇಕಡಾ ೪೦ರಷ್ಟು ಕೊಡುಗೆಯನ್ನು ನಾವು ನೀಡಿದ್ದೇವೆ. ಕರೊನಾ ಸಂಕಷ್ಟದಲ್ಲೂ ವಾಣಿಜ್ಯ ತೆರಿಗೆ ೩೦,೪೬೭ ಕೋಟಿ ರೂ. ಹಾಗು ಅಬಕಾರಿ ಇಲಾಖೆ ೧೬೭೮೮ ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಆಹಾರ ಭದ್ರತೆಯನ್ನು ಸರ್ಕಾರ ಖಾತರಿಪಡಿಸಿದೆ. ಕರೊನಾ ಲಾಕ್ಡೌನ್ ಸಮಯದಲ್ಲಿ ೯೦ ಲಕ್ಷ ಪ್ಯಾಕ್ ಮಾಡಿದ ಪೌಷ್ಟಿಕ ಆಹಾರ ಪೊಟ್ಟಣಗಳನ್ನು ಒದಗಿಸಿದೆ ಎಂದು ಮೂಲಕ ಸರ್ಕಾರ ಕಾರ್ಯಕ್ಕೆ ಫುಲ್ ಮಾರ್ಕ್ಸ್ ನೀಡಿದರು. ರೈಲುಗಳ ಮೂಲಕ ಕಾರ್ಮಿಕರನ್ನು ಅವರವರ ಸ್ವಂತ ಊರುಗಳಿಗೆ ಕಳುಹಿಸುವ ಕೆಲಸ ಮಾಡಿದೆ. ಅಸಂಘಟಿತ ಕಾರ್ಮಿಕರಿಗೆ ೫,೩೭೨ ಕೋಟಿ ರೂ. ಮೌಲ್ಯದ ಹಣಕಾಸು ನೆರವು ನೀಡಿದೆ. ಸುಮಾರು ೬೩,೫೯,೦೦೦ ಫಲಾನುಭವಿಗಳಿಗೆ ನೆರವು ಸಿಕ್ಕಿದೆ. ೧೧,೭೭೦ ಚರ್ಮ ಕುಶಲ ಕರ್ಮಿಗಳಿಗೆ ತಲಾ ೫೦೦೦ ರೂಪಾಯಿಗಳಂತೆ ಸಹಾಯ ಧನ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ನಿಧಿಯಲ್ಲಿ ೫೧ ಲಕ್ಷ ರೈತರಿಗೆ ೨೦೦೦ ರೂಪಾಯಿ ಹೆಚ್ಚುವರಿ ಮೊತ್ತದೊಂದಿಗೆ ೧೦೨೦ ಕೋಟಿ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದರು.ಬಿಎಸ್‌ವೈ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲ ವಜುಭಾಯಿ ವಾಲಾ
