ಮಸ್ಕಿ: ಬಿಜೆಪಿ ಮಹಾಶಕ್ತಿ ಕೇಂದ್ರದ ಮುಖಂಡರು ಪಕ್ಷ ಸಂಘಟನೆ ಮಾಡುವುದರ ಮೂಲಕ ಬಿಜೆಪಿಗೆ ಬಲ ನೀಡಬೇಕೆಂದು ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಕರೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಬಳಿಕ ಮಾತನಾಡಿ, ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಗುರಿ ನಮ್ಮದಾಗಬೇಕು, ಎದುರಾಳಿ ಮುಖಂಡರ ಪ್ರಭಾವ ಇರುವ ಬೂತ್ ಗಳಲ್ಲಿ ಬಿಜೆಪಿ ಲೀಡ್ ಮಾಡಿ ತೋರಿಸಬೇಕು. ಈ ನಿಟ್ಟಿನಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕೆಲಸ ನಿರ್ವಹಿಸಬೇಕೆಂದು ಹೇಳಿದರು.

ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ ಮಾತನಾಡಿ, ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿ ಬೂತ್ ಮಟ್ಟದಲ್ಲಿ ಹೆಚ್ಚಿನ ಒತ್ತು ಕೊಟ್ಟು ಉಪ ಚುನಾವಣೆಯಲ್ಲಿ ಪ್ರತಾಪಗೌಡ ಅವರನ್ನು ಗೆಲ್ಲಿಸುವ ಪ್ರಯತ್ನ ನಮ್ಮದಾಗಬೇಕು ಎಂದರು.

ಬಿಜೆಪಿ ಮಸ್ಕಿ ಮಂಡಲದ ಅಧ್ಯಕ್ಷರಾದ ಶಿವಪುತ್ರಪ್ಪ ಹರಳಹಳ್ಳಿ, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಶರಣಬಸವ ಉಮಲೂಟಿ, ಬಿಜೆಪಿ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಅಂದಾನಪ್ಪ ಗುಂಡಳ್ಳಿ, ದೊಡ್ಡಪ್ಪ ಕಡಬೂರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ವಾಸಪ್ಪಗೌಡ, ಬಿಜೆಪಿ ಮಂಡಳ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಎಪಿಎಂಸಿ ಅಧ್ಯಕ್ಷ ಮಲ್ಲರೆಡ್ಡೆಪ್ಪ ಇನ್ನಿತರ ಬಿಜೆಪಿ ಮುಖಂಡರಿದ್ದರು.

Leave a Reply

Your email address will not be published. Required fields are marked *

You May Also Like

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.

ಪರಪ್ಪನ ಅಗ್ರಹಾರಕ್ಕೂ ಕೊರೊನಾ ಕಾಟ..!

ಬೆಂಗಳೂರು: ಕೊರೊನಾ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಸದ್ಯ ಇದು ಪರಪ್ಪನ ಅಗ್ರಹಾರಕ್ಕೂ ಎಂಟ್ರಿ…

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.