ಗಂಗಾಮತ ಸಮಾಜದ ವಧು-ವರರ ಸಮಾವೇಶ

ಗದಗ: ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ಸಮಾವೇಶವನ್ನು ಗಂಗಾಮತ ಸಮಾಜದ ರಾಜ್ಯಾಧ್ಯಕ್ಷ ಡಾ.ಬಿ. ಮೌಲಾಲಿ ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷ ಬಿ.ಎನ್. ಯರನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಂಗಾಮತ ಸಮಾಜದ ಬಂಧುಗಳು, ವಧು-ವರರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಜೆ.ಬಿ. ಗಾರವಾಡ ಮೊ: 9448640866 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version