ಮುಂಬೈ: ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಈ ಹೇಳಿಕೆ ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದು, ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.

ಸಿಎಂ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷಿಕ ಪ್ರದೇಶಗಳನ್ನು ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಮಾತನಾಡಿದ್ದರಿಂದ ಲಕ್ಷ್ಮಣ ಸವದಿ ಕರ್ನಾಟಕದ ಜನರನ್ನು ಸಮಾಧಾನಪಡಿಸಲು ಇಂತಹ ಹೇಳಿಕೆ ನೀಡಿದ್ದಾರೆ. ಮುಂಬೈ ಎಂದಿಗೂ ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿರುತ್ತದೆ ಎಂದರು.

ಶಿವಸೇನೆ ಮುಖಂಡ ಸಂಜಯ್ ರಾವುತ್ ಮಾತನಾಡಿ, ಲಕ್ಷ್ಮಣ ಸವದಿ ಮೊದಲು ಇತಿಹಾಸ ತಿಳಿದುಕೊಳ್ಳಲಿ. ಮರಾಠಿ ಭಾಷಿಕರಿರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎನ್.ಸಿ.ಪಿ. ವಕ್ತಾರ ಮಹೇಶ್ ತಾಪಸೆ ಮಾತನಾಡಿ, ಲಕ್ಷ್ಮಣ್ ಸವದಿ ಹೇಳಿಕೆಯ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಮೊದಲನೇ ಹಂತದ ಚುನಾವಣೆ ಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ: ಗದಗ ಜಿಲ್ಲೆಯಲ್ಲಿ ಸಲ್ಲಿಕೆಯಾದ ಮತಪತ್ರಗಳ ವಿವರ

ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 88…