ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.

ಎಲ್ಲ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿಗಳು 2019-20ನೇ ಸಾಲಿನ ಬಸ್‌ಪಾಸ್ ಹಾಗೂ ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿ ಯೊಂದಿಗೆ ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಪೆ.28 ರವರೆಗೆ ಅವಕಾಶ ಕಲ್ಪಿಸಿದೆ.

ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್ ಆರ್‌ಟಿಸಿ ನಿಗಮವು ಪೆ. 28 ರವರೆಗೆ ಅವಕಾಶ ಕಲ್ಪಿಸಿದೆ.

ಪ್ರಸಕ್ತ ವರ್ಷದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಹೊಸ ಬಸ್‌ಪಾಸ್ ಪಡೆಯಬೇಕಿರುವುದರಿಂದ ಈ ಬಗ್ಗೆ ತಮ್ಮ ವಿಭಾಗ ವ್ಯಾಪ್ತಿಯ ಶಾಲಾ/ಕಾಲೇಜು ಮಕ್ಕಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯುವಂತೆ ಕೆಎಸ್ ಆರ್‌ಟಿಸಿ ತಿಳಿಸಿದೆ.

Exit mobile version