ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಬೇಟಿ ಕೊಟ್ಟು ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಮರ್ಪಿಸಿದರು.


ಬಿಜೆಪಿ ಸಭಾಪತಿ ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಟ್ಟ ನಂತರ ಪರಿಷತ್‌ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನ ಅಲಂಕರಿಸಲಿದ್ದಾರೆ. ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪಕ್ಷದ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದ್ದರು. ಸಭಾಪತಿ ಸ್ಥಾನದ ಬಸವರಾಜ ಹೊರಟ್ಟಿ ಅವರಿಗೆ ಹುದ್ದೆ ನೀಡುವ ಸಂಬAಧ ಸಭೆಯಲ್ಲಿ ಸದಸ್ಯರು ಸರ್ವಾನುಮತದ ಸಹಮತ ವ್ಯಕ್ತಪಡಿಸಿದ್ದರು.


ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡಲು ದೇವೇಗೌಡರು ಸಹ ಒಪ್ಪಿಗೆ ನೀಡಿದ್ದಾರೆ. ಇಂದು ಹೊರಟ್ಟಿ ಅವರು ಬೆಳಗ್ಗೆ ಗೌಡರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

2020-21 ರಿಂದ ಮುಂದಿನ ಐದು ವರ್ಷಗಳ ಅವಧಿಗೆ ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…

ಪಿಎಸಿ ತನಿಖೆಗೆ ತಡೆ ನೀಡಿದ ಕಾಗೇರಿ: ರವಿಕೃಷ್ಣಾ ರೆಡ್ಡಿ ವಿರೋಧ

ಬೆಂಗಳೂರು: ವೈದ್ಯಕೀಯ ಸಾಮಗ್ರಿಗಳ ಖರೀದಿ ಅಕ್ರಮ ದೂರು ಕುರಿತು ತನಿಖೆಗೆ ತಡೆ ನೀಡಿದ ಸ್ಪೀಕರ್ ವಿಶ್ವೇಶ್ವರ…

ಊರಿಗೊಂದು ಸ್ಮಶಾನಕ್ಕೆ ಆದ್ಯತೆ: ಸಚಿವ ಆರ್.ಅಶೋಕ್

ಗದಗ: ರಾಜ್ಯ ಸರ್ಕಾರ ಊರಿಗೊಂದು ಸ್ಮಶಾನಕ್ಕೆ ಆದ್ಯತೆ ನೀಡಿದ್ದು, ಈ ಬಗ್ಗೆ ಅನುದಾನದ ವ್ಯವಸ್ಥೆ ಕೂಡ…