ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ಗದಗ: ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ಗದಗ-ವಾಡಿ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಲಿಖಿತ ಮಾಹಿತಿ ಒದಗಿಸಲಾಗುವುದು. ಪ್ರಸ್ತುತ ಇರುವ ರೈಲೆ ನಿಲ್ದಾಣ ಯೋಜನೆಗಳ ಪರಿಶೀಲನೆ ಮಾಡಲಾಗಿದೆ. ಹೊಸ ಯೋಜನೆಗಳಿಗೆ ಕುರಿತಂತೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ನಂತರ ರೈಲು ನಿಲ್ದಾಣದ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ಭಾರತರತ್ನ ಡಾ.ಭೀಮಸೇನ್ ಜೋಶಿ ಹಾಗೂ ಗಾನಯೋಗಿ ಡಾ.ಪಂಡಿತ ಪುಟ್ಟರಾಜ ಗವಾಯಿ ಅವರ ಪುತ್ಥಳಿಗಳನ್ನು ಅನಾವರಣಗೊಳಿಸಿದರು.

ರೈಲು ನಿಲ್ದಾಣ ಹಾಗೂ ಸಿಬ್ಬಂದಿಗಳ ಕಾರ್ಯ ವೈಖರಿ ವಿವರಿಸುವ ಹಾಗೂ ನಿಲ್ದಾಣದ ಪ್ರಾತ್ಯಕ್ಷಿಕೆ ಬಿಂಬಿಸುವ ಚಿತ್ರಗಳ ಗ್ಯಾಲರಿ ಉದ್ಘಾಟಿಸಿ ವೀಕ್ಷಿಸಿದರು.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಗಣೇಶ್‌ಸಿಂಗ್ ಬ್ಯಾಳಿ ಹಾಗೂ ಜಿಲ್ಲಾ ವಾಣಿಜ್ಯೋಧ್ಯಮ ಸಂಸ್ಥೆ ಪದಾಧಿಕಾರಿಗಳು ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನ ಕುರಿತಂತೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

Exit mobile version