ಬೆಂಗಳೂರ: ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದೆಯೂ ವಾರದ ರಜೆ ಕಡ್ಡಾಯಗೊಳಿಸುವಂತೆ ಆದೇಶ ನೀಡಲಾಗಿತ್ತು. ಆದ್ದರಿಂದ  ಕೆಲ ಸಿಬ್ಬಂದಿಗಳು ತಮಗೆ ಠಾಣಾಧಿಕಾರಿಗಳು ವಾರದ ರಜೆಯನ್ನ ನೀಡುತ್ತಿಲ್ಲ ​ಎಂದು ಡಿಜಿ ಮತ್ತು ಐಜಿಪಿ  ಪ್ರವೀಣ್ ಸೂದ್ ಅವರಿಗೆ ಕೆಲ ನೊಂದ ಪೊಲೀಸರು ಪತ್ರದ ಮೂಲಕ ದೂರು ನೀಡಿದ್ದರು. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಪ್ರವೀಣ್‌ ಸೂದ್‌ ಅವರು ತಮ್ಮ ಠಾಣೆಯಲ್ಲಿ ಕೆಲಸ ಮಾಡುವ ಪೊಲೀಸ್‌ ಅಧಿಕಾರಿಗಳಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಸೂಚಿಸಿದ್ದಾರೆ.

ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 249 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9399…

ಜನ ದೇಣಿಗೆ ನೀಡಿದ್ದು ಮಂದಿರಕ್ಕಾಗಿ, ಬಿಜೆಪಿಗಲ್ಲ: ಸಿದ್ದರಾಮಯ್ಯ ಟೀಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜನರು ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.