ವಾಷಿಂಗ್ಟನ್ : ದೇಶದಲ್ಲಿ ಜ.30 ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹುತಾತ್ಮರಾದ ದಿನ ಆಚರಿಸಲಾಗುತ್ತಿದ್ದು, ಅಮೇರಿಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ದ್ವಂಸಗೊಳಸಿದ್ದಾರೆ.

ಅಮೇರಿಕದ ಕ್ಯಾಲಿರ್ಪೋನಿಯಾದ ಡೇವಿಸ್ ನಗರದಲ್ಲಿ ಕಿಡಿಗೇಡಿಗಳಿಂದ ಈ ಘಟನೆ ನಡೆದಿದ್ದು, ಇದಕ್ಕೆ ಭಾರತೀಯ ಮೂಲದ ಅಮೆರಿಕನ್ನರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಡೇವಿಸ್ ನಗರ ಸ್ಥಳೀಯ ಆಡಳಿತದ ಸದಸ್ಯ ಲೂಕಸ್ ಫ್ರೀರಿಚ್ಸ್, ನಗರದ ಸೆಂಟ್ರಳ್ ಪಾರ್ಕ್ ನಲ್ಲಿರುವ ಗಾಂಧಿಜಿ ಅವರ 6 ಅಡಿ ಎತ್ತರದ, 294 ಕೆ.ಜಿ ತೂಕದ ಕಂಚಿನ ಪ್ರತಿಮೆಯನ್ನು ದ್ವಂಸಗೊಳಿಸಲಾಗಿದೆ. ಸದ್ಯ ಪ್ರತಿಮೆಯನ್ನು ಅಲ್ಲಿಂದ ತೆಗೆಯಲಾಗಿದ್ದು, ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಹೇಳಿದ್ದಾರೆ.

ಜ.27 ರಂದು ದ್ವಂಸಗೊಂಡಿರುವ ಗಾಂಧಿ ಪ್ರತಿಮೆ ಪತ್ತೆಯಾಗಿತ್ತು. ಈ ಬಗ್ಗೆ ಪಾರ್ಕ್ ನ ಸಿಬ್ಬಂದಿ ಮಾಹಿತಿ ನೀಡಿದ್ದರು. ಗಾಂಧೀಜಿ ಅವರ ಪ್ರತಿಮೆಯು ಡೇವಿಸ್ ನಗರದ ಸಂಸ್ಕೃತಿಯ ಒಂದು ಭಾಗವಾಗಿದೆ. ನಾವು ಈ ಘಟಣೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೇ.22 ರಂದು ವಿಶೇಷ ರೈಲು ಸೇವೆ: ಸಚಿವ ಸುರೇಶ್ ಅಂಗಡಿ

ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ…

ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಅರ್ಹರಲ್ವಂತೆ..!

ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…

ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ ಹೇಳಿಕೆ: ಭವನ ನಿರ್ಮಾಣಕ್ಕೆ ಅಗತ್ಯ ಅನುದಾನಕ್ಕಾಗಿ ಸರ್ಕಾರದ ಗಮನ ಸೆಳೆಯಲಾಗುವುದು

ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮನು ಬಳಿಗಾರ ಅವರು ಶನಿವಾರ ಪಟ್ಟಣದಲ್ಲಿ ನಿರ್ಮಣ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.