ಶಿರಹಟ್ಟಿ: ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.
ಖಾತೆ ಬದಲಾವಣೆ ಹಾಗೂ ಕಂಪ್ಯೂಟರ್ ಉತಾರಕ್ಕೆ ಲಂಚದ ಬೇಡಿಕೆ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ ಅವರ ದೂರಿನ ಮೇರೆಗೆ ಎಸಿಬಿ ದಾಳಿ ನಡೆಸಿದ್ದಾರೆ. ಎಸಿಬಿ ಡಿಎಸ್ಪಿ ಎನ್. ವಾಸುದೇವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.