ನರೇಗಲ್: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ  ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ, ಕೇಂದ್ರ ಸರಕಾರವು ಪೆಟ್ರೋಲ್, ಡೀಸೆಲ್ ಸೇರಿದಂತೆ  ದಿನನಿತ್ಯದ ಪದಾರ್ಥಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಜನರು ಪರಿತಪಿಸುವಂತಾಗಿದೆ. ಕೇಂದ್ರ ಸರಕಾರ ಬೆಲೆ ಏರಿಕೆಯ ನಿಯಂತ್ರಣ ಮಾಡುವ ಮೂಲಕ ಜನತೆ ಪರಿತಪಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಪ್ರಭಾವದಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬಂದಿದೆ.  ಈ ನಡುವೆ ಜನಸಾಮಾನ್ಯರಿಗೆ ಅಗತ್ಯವಾದ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಗಾಯದ ಮೇಲೆ ಬರೆ ಹಾಕಿದೆ. ತೈಲಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತು ಬೆಲೆ ಹೆಚ್ಚಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಸರ್ಕಾರ ಕೂಡಲೇ ತೈಲಬೆಲೆ ಏರಿಕೆ ನಿಯಂತ್ರಣ ಮಾಡಬೇಕಿದೆ ಎಂದು ಆಗ್ರಹಿಸಿದರು.

ಹಳೆ ಬಸ್ ನಿಲ್ದಾಣದಿಂದ ಪ್ರತಿಭಟನೆ ನಡೆಸುತ್ತಾ ದುರ್ಗಾ ವೃತ್ತದಲ್ಲಿ ಬಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಿಂಗಪ್ಪ ಹೊನ್ನಾಪುರ,  ಶರಣಪ್ಪ ಕರಮುಡಿ,  ಪರಶುರಾಮ ನವಲಗುಂದ, ಕಳಕಪ್ಪ ಹುನಗುಂದ, ರಮೇಶ ಕಾಟಿ, ಕಳಕಪ್ಪ ಹೆಗಡೆ, ಮಹಾಂತೇಶ ಅರಹುಣಸಿ, ಅನಿಲ ಸಿಳ್ಳಿ, ಮಂಜುನಾಥ ನಡವಲಕೇರಿ, ವಸಂತ ನಡವಲಕೇರಿ, ಅರ್ಜುನ ನಡವಲಕೇರಿ ಇದ್ದರು.

Leave a Reply

Your email address will not be published. Required fields are marked *

You May Also Like

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಅಸಮರ್ಪಕ ಬಸ್ ಸೌಲಭ್ಯ: ವಿದ್ಯಾರ್ಥಿಗಳ ಪ್ರತಿಭಟನೆ

ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದು, ಸಮಪರ್ಕಕ ಸಾರಿಗೆ ಕಲ್ಪಿಸುವಂತೆ‌ ಒತ್ತಾಯಿಸಿ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮುಂಜಾನೆ ಬಸ್ ಗಳನ್ನು ತಡೆದು ದಿಢೀರ್ ಪ್ರತಿಭಟನೆ ಕೈಗೊಂಡ ಘಟನೆ ನಡೆಯಿತು.

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…