ತೀರ್ಥಹಳ್ಳಿ:
ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ.
ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.
ಸಂದೇಶ ಮತ್ತು ಅರ್ಚನಾ ದಂಪತಿಗಳು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದರು. ಬೆಂಗಳೂರಿಗೆ ವಾಪಸ್ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಇಂತಹ ಸಮಯದಲ್ಲಿಯೇ ಈ ದುರ್ಘಟನೆ ಸಂಭವಿಸಿದೆ.
ಅಡಕೆ ನುಂಗಿ ಮಗು ಮೃತಪಟ್ಟಿದ್ದರಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಗ್ಯ ಇಲಾಖೆ ಇತ್ತೀಚೆಗೆ ಆಯೋಜಿಸಿದ್ದ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಉತ್ತಮ ಆರೋಗ್ಯವಂತ ಮಗು ಎಂದು ನಿಶಾನ್ ಪ್ರಥಮ ಬಹುಮಾನವನ್ನು ಗಳಿಸಿತ್ತು

Leave a Reply

Your email address will not be published. Required fields are marked *

You May Also Like

ಶಿಕ್ಷಕರ ವರ್ಗಾವಣೆ : ಗಣಕೀಕೃತ ಕೌನ್ಸಿಲಿಂಗ್

2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.