ಶೀಘ್ರವೇ ಅಂಗನವಾಡಿ ಬಾಗಿಲು ತೆರೆಯಲು ಸರ್ಕಾರ ನಿರ್ಧಾರ

ಬೆಂಗಳೂರು : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಅಂಗನವಾಡಿ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಿ 3 ರಿಂದ 6 ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ 30 ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚನೆ ನೀಡಿದೆ.

Exit mobile version