ಕೋಲಾರ:
ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.
ನಗರಸಭೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ನಗರದ ಶ್ರೀನಿವಾಸಪುರ ರಸ್ತೆಯ ವೃತ್ತದಿಂದ ಚಿಕ್ಕಬಳ್ಳಾಪುರ ಮಾರ್ಗದ ರೈಲ್ವೆ ಸೇತುವೆವರೆಗೆ ರಸ್ತೆಗಳ ಒತ್ತುವರಿ ವೀಕ್ಷಿಸಿ ಒತ್ತುವರಿದಾರರಿಗೆ ನೋಟಿಸ್ ಕೊಟ್ಟು ತೆರವಿಗೆ ಸೂಚನೆ ನೀಡಿದರು.
ರಸ್ತೆ ಬದಿಯ ಚರಂಡಿಗಳಲ್ಲಿ ಕಸವನ್ನು ಹಾಕುವುದರಿಂದ ಕೊಳಚೆ ನೀರು ಸರಾಗವಾಗಿ ಹರಿಯದೆ ರೋಗಗಳಿಗೆ ಅವಕಾಶ ಮಾಡಿ ಕೊಟ್ಟಂತಾಗುವುದು. ಹಾಗಾಗಿ ಸಾರ್ವಜನಿಕರು ತಮ್ಮ ಸುತ್ತಮುತ್ತಲು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ರಸ್ತೆಬದಿಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ನಿಲ್ಲಿಸಬಾರದು. ವಾಹನಗಳ ಸಂಚಾರಕ್ಕೆ ಅನುವು ಮಾಡಬೇಕು. ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸುವವರಿಗೆ ದಂಡ ವಿಧಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ ಸಮೀಪದ ಟರ್ಮಿನಲ್ ಟ್ರಕ್ ಲಾರಿ, ಟೆಂಪು ನಿಲ್ದಾಣಗಳು ನಗರಸಭೆಗೆ ಸೇರಿದ ಆಸ್ತಿಯಾಗಿರುವುದರಿಂದ ಲಾರಿ, ಟೆಂಪುಗಳ ಬಳಿ ಪಾರ್ಕಿಂಗ್ ಶುಲ್ಕವನ್ನು ವಸೂಲಿ ಮಾಡಿ ಚಾಲಕರಿಗೆ ಅಗತ್ಯವಾದ ಮೂಲ ಸೌಲಭ್ಯಕಲ್ಪಿಸಿ ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ನಗರ ಯೋಜನಾ ನಿರ್ದೇಶಕ ರಾಮಸ್ವಾಮಿ, ನಗರಸಭೆ ಪೌರಾಯುಕ್ತ ಶ್ರೀಕಾಂತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಮುಸ್ಟಕ್ ಆಹಮದ್, ಅಮೃತ ಯೋಜನಾಧಿಕಾರಿ ನಾರಾಯಣಸ್ವಾಮಿ, ಶ್ರೀನಾಥ್, ನಗರಸಭೆ ಎಂಜಿನಿಯರ್ ರಾಮಮೂರ್ತಿ, ಪರಿಸರ ಅಧಿಕಾರಿ ಪುನೀತ್, ನಗರಸಭೆ ಕಂದಾಯಾಧಿಕಾರಿ ಚಂದ್ರು, ನಿರೀಕ್ಷಕ ತ್ಯಾಗರಾಜ್, ನಾರಾಯಣಸ್ವಾಮಿ, ಮುಹೂಬೂಪ್ ಪಾಷ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ನಾಗಾಲೋಟ

ಗದಗ:ಜಿಲ್ಲೆಯಲ್ಲಿ ಕೂರೂನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ…

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ…