ಏ.1 ರಿಂದ ಬಿಪಿಎಲ್ ಕಾರ್ಡ್ ದಾರರಿಗೆ ವಿವಿಧ ಧಾನ್ಯ ವಿತರಣೆ


ಬೆಳಗಾವಿ :
ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ನಗರದಲ್ಲಿ ರವವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಜೊತೆಗೆ, ಇತರೆ ಧಾನ್ಯ ವಿತರಿಸುವಂತ ಯೋಜನೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ಜೋಳ, ತೊಗಲಿ, ಹೆಸರುಬೇಳೆ ವಿತರಿಸಲಾಗುತ್ತದೆ ಎಂದರು.
ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಹೆಸರು ಬೇಳೆ ವಿತರಿಸಿದ್ರೇ, ದಕ್ಷಿಣ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ತಿಳೀಸಿದರು.

Exit mobile version