ಬೆಳಗಾವಿ :
ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ನಗರದಲ್ಲಿ ರವವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಜೊತೆಗೆ, ಇತರೆ ಧಾನ್ಯ ವಿತರಿಸುವಂತ ಯೋಜನೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ಜೋಳ, ತೊಗಲಿ, ಹೆಸರುಬೇಳೆ ವಿತರಿಸಲಾಗುತ್ತದೆ ಎಂದರು.
ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಹೆಸರು ಬೇಳೆ ವಿತರಿಸಿದ್ರೇ, ದಕ್ಷಿಣ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ತಿಳೀಸಿದರು.

Leave a Reply

Your email address will not be published. Required fields are marked *

You May Also Like

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಗದಗನಲ್ಲಿ ಜನ ಜಾಗೃತಿ ರಥಕ್ಕೆ ಚಾಲನೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.

ಲಾಕ್ ಡೌನ್ ತೆರವಿನಿಂದ ಕೊರೊನಾ ಪ್ರಮಾಣದಲ್ಲಿ ಹೆಚ್ಚಳ: ಕೇಜ್ರಿವಾಲ್

ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು.