ಪಾಲ್ಘರ್ :
ಚೆನ್ನೈನಲ್ಲಿ ಅಪಹರಣಕ್ಕೊಳಗಾಗಿದ್ದ 26 ವರ್ಷದ ನೌಕಾಪಡೆಯ ಅಧಿಕಾರಿಯನ್ನು ದುಷ್ಕರ್ಮಿಗಳು ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ನೌಕಾಧಿಕಾರಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರವಾಗಿ ಗಾಯಗೊಡಿದ್ದ ಜಾರ್ಖಂಡ್ನ ರಾಂಚಿ ಮೂಲದ ಸೂರಜ್ ಕುಮಾರ್ ದುಬೆ ಅವರು ಮುಂಬೈನ ನ್ಯಾವಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೊಯಮತ್ತೂರ್ ವಿಭಾಗದ ಭಾರತೀಯ ನೌಕಾದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೂರಜ್ ಕುಮಾರ್, ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಲು ಚೆನ್ನೈಗೆ ಬಂದಿದ್ದರು.
ರಾತ್ರಿ 9 ಗಂಟೆ ಗೆ ಗನ್ ತೋರಿಸಿ, ಮೂವರು ದುಷ್ಕರ್ಮಿಗಳು ವಿಮಾನ ನಿಲ್ದಾಣದಿಂದ ಸೂರಜ್ರನ್ನು ಅಪಹರಿಸಿದ್ದಾರೆ. ಜೊತೆಗೆ 10 ಲಕ್ಷ ರೂಗಳಿಗೆ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ.
ಅಪಹರಿಸಿದ ನಂತರ ಚೆನ್ನೈನಲ್ಲಿ ಮೂರು ದಿನಗಳ ಬಂಧಿಸಿಟ್ಟಿದ್ದು, ಬಳಿಕ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ತಲಸಾರಿ ಪ್ರದೇಶದ ವೆಜ್ಜಿ ಎಂಬಲ್ಲಿಗೆ ಸ್ಥಳಾಂತರಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಸೂರಜ್ನನ್ನು ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದ ದುಬೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ನಂತರ ಶೇ.90 ರಷ್ಟು ಗಾಯಗಳಾಗಿದ್ದ ಅವರನ್ನು ಮುಂಬೈನ ನ್ಯಾವಿ ಆಸ್ಪತ್ರೆ ದಾಖಲಿಸಲಾಯಿತಾದರೂ, ದಾರಿ ಮಧ್ಯೆಯೇ ಆತ ಕೊನೆಯುಸಿರೆಳೆದಿದ್ದ ಎಂದು ಪೊಲೀಸ್ ಅಧಿಕಾರಿ ನವಾಡ್ಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವೀರಪ್ಪನ್ ಪುತ್ರಿಯೀಗ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆ

ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ ವಿದ್ಯಾರಾಣಿಯನ್ನು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ವಿದ್ಯಾರಾಣಿ ಬಿಜೆಪಿಗೆ ಸೇರಿದ್ದರು. ಈ ಕುರಿತು ಮಾತನಾಡಿರುವ ವಿದ್ಯಾರಾಣಿ, ಸಾಮಾಜಿಕ ಕೆಲಸ ಮಾಡುವುದು ನನ್ನ ಗುರಿ. ಯಾವುದೇ ಒಂದು ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದಿಲ್ಲ. ಮಾನವೀಯತೆಯೇ ಮುಖ್ಯ’ ಎಂದಿದ್ದಾರೆ.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ?

ಭಾರತ ಸದ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ.

ತಂದೆಯೇ ಆಸರ ಎಂದು ನಂಬಿದ್ದ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ ಪಾಪಿ ತಂದೆ!

ಲಕ್ನೋ : ಪಾಪಿ ತಂದೆಯೊಬ್ಬ ಮಗಳ ಮೇಲೆಯೇ 6 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.