ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ. 

ಬಿಜೆಪಿ ನಾಯಕ ಶಿರೀಶ್ ಕಟೇಕರ್ ಎಂಬುವವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ನಮ್ಮ ರಾಜ್ಯದ ಸಿಎಂ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ್ದಕ್ಕೆ ಮಸಿ ಬಳೆದಿದ್ದೇವೆ ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. 

ನಮ್ಮ ನಾಯಕರ ಕುರಿತು ಈ ರೀತಿಯಾಗಿ ನಡೆದುಕೊಂಡರೆ ನಾವು ಯಾವುದೇ ರೀತಿಯ ಕಾರ್ಯಕ್ಕೂ ಸಿದ್ಧ. ನಾವು ದಾಳಿ ಮಾಡಿ ಜೈಲಿಗೆ ಹೋಗುವುದಕ್ಕೂ ಸಿದ್ಧ ಎಂದು ಕಾರ್ಯಕರ್ತರು ಹೇಳಿದ್ದಾರೆ. 

ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಬಿಜೆಪಿ ನಾಯಕ ರಾಮ್ ಕದಾಮ್ ಹಲ್ಲೆ ಮಾಡಿರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚು ಹೆಚ್ಚಿಸಿದ ಚುನಾವಣಾ ಆಯೋಗ!

ನವದೆಹಲಿ : ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ. 10ರಷ್ಟು ಹೆಚ್ಚಿಸಲಾಗಿದೆ.

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…

ಪೆಟ್ರೋಲ್-ಡೀಸೆಲ್ ದರ ಏರಿಕೆ

ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…