ನವದೆಹಲಿ:
ಹಿಮಪಾತದಿಂದಾಗಿ ಉತ್ತರಾಖಂಡದ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ನಂದಾ ದೇವಿ ಹಿಮನದಿಯ ಒಂದು ಭಾಗದಲ್ಲಿ ಹಿಮಪಾತವಾಗಿ, ಅಲಕಾನಂದ ನದಿಯು ಉಕ್ಕಿ ಹರಿದು ಜಲವಿದ್ಯುತ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಕಾರ್ಮಿಕರು ಕಣ್ಮರೆಯಾಗಿದ್ದಾರೆ.
ಉತ್ತರಾಖಂಡದಲ್ಲಿ ಹಿಮಪಾತ 125 ಜನರು ಕಾಣೆಯಾಗಿರುವ ಬಗ್ಗೆ ಸಿಎಂ ತ್ರಿವೇಂದ್ರ ಸಿಂಗ್ ಟ್ವೀಟ್ ಮಾಡಿರುವ ಪಿಎಂಒ, ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ) ಯಿಂದ ತಲಾ 2 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದೆ.
ಉತ್ತರಾಖಂಡದಲ್ಲಿ ಸಂಭವಿಸಿದ ವಿನಾಶದ ಬಗ್ಗೆ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಪತ್ರಿಕಾಗೋಷ್ಠಿಯಲ್ಲಿ ಐಟಿಬಿಪಿ ಮತ್ತು ಎಸ್‌ಡಿಆರ್‌ಎಫ್ ತಂಡ ಜನರನ್ನು ರಕ್ಷಿಸುವಲ್ಲಿ ತೊಡಗಿದೆ ಎಂದು ತಿಳಿಸಿದರು. ಹಾಗೂ ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದರು.

Leave a Reply

Your email address will not be published. Required fields are marked *

You May Also Like

ಚುನಾವಣೆಯಲ್ಲಿ ಸಮೀಕ್ಷೆ ನಡೆಸಿ, ಭವಿಷ್ಯ ನುಡಿದರೆ ಹುಷಾರ್!

ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭವಿಷ್ಯ ನುಡಿಯದಂತೆ ಆಯೋಗ ಎಚ್ಚರಿಕೆ ನೀಡಿದೆ.

ಸ್ತ್ರೀ ಅವತಾರದಲ್ಲಿ ಮದುವೆ ಮನೆಗೆ ಭೇಟಿ ನೀಡಿದ ಪ್ರಿಯತಮ

ಭಾಡೋಧಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಹುಡುಗಿ ಬೇರೆಯವನೊಂದಿಗೆ ವಿವಾಹವಾಗುತ್ತಿದ್ದ ಸಂದರ್ಭದಲ್ಲಿ ಈತ ಸ್ತ್ರೀ ಅವತಾರದಲ್ಲಿ ತಯಾರಾಗಿ ಗರ್ಲ್ ಫ್ರೆಂಡ್​ ಮನೆಗೆ ಎಂಟ್ರಿ ಕೊಟ್ಟಿದ್ದಾನೆ.

ಕಾರ್ಮಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸುತ್ತಿರುವ ರೈಲ್ವೆ ಇಲಾಖೆ!

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದ ಐವರ ಸಾವು – ಹಲವರು ಗಂಭೀರ

ತಿರುವನಂತಪುರಂ : ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವಿಸಿದ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ.