ಬೆಂಗಳೂರು :
ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.
ಪೌರಾಡಳಿತ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರ್ನಾಟಕ ಪೌರ ಸಭೆಗಳು ಮತ್ತು ಕೆಲವು ಇತರ ಕಾನುನು (ತಿದ್ದುಪಡಿ) ಮಸೂದೆ -2021, ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ಮಸೂದೆ-2021 ಅನ್ನು ಪೌರಾಡಳಿತ ಸಚಿವೆ ಎಂಟಿಬಿ ನಾಗರಾಜ್ ಮಂಡಿಸಿದರು.
ಸ್ಥಿರಾಸ್ತಿ ಮಾರ್ಗಸೂಚಿ ದರದ ಆಧಾರದಲ್ಲಿ ಪ್ರತಿ ವರ್ಷವೂ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ನೀಡುವುದು, ತೆರಿಗೆ ಪರಿಷ್ಕರಣೆ ದರದಲ್ಲಿ ಹೆಚ್ಚಳ, ತೆರಿಗೆ ಪಾವತಿ ವಿಳಂಬವಾದರೆ ತಿಂಗಳಿಗೆ ಶೇ.2 ರಷ್ಟು ಬಡ್ಡಿ ವಿಧಿಸಲು ಸರ್ಕಾರ ಸಜ್ಜಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಡೋಣಿಯಲ್ಲಿ ತೆಂಗಿನಮರಕ್ಕೆ ಬೆಂಕಿ

ಮುಂಡರಗಿ: ತಾಲೂಕುನ ಡೋಣಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಟೆಂಗಿನಮರ ಸುಟ್ಟಿದೆ.

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…