ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ.
ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ ರೂ. 40 ಲಕ್ಷಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಇಲ್ಲಿಯ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್ನಿಂದದ ಪದ್ಮಜಾ ರಾವ್ ಅವರು, ಹಂತ ಹಂತವಾಗಿ ಸುಮಾರು ರೂ. 41 ಲಕ್ಷ ರೂಪಾಯಿಗಳನ್ನು ಬ್ಯಾಂಕ್ ಖಾತೆಯ ಮೂಲಕ ಸಾಲ ಪಡೆದುಕೊಂಡಿದ್ದರು. ಅಲ್ಲದೇ, ಸಾಲದ ಭದ್ರತೆಗಾಗಿ ರೂ. ನಾಲ್ವತ್ತು ಲಕ್ಷ ರೂಪಾಯಿಗಳ ಚೆಕ್ ಕೂಡ ನೀಡಿದ್ದರು.
ವಾರಂಟ್ ಈಗಾಗಲೇ ತಲಘಟ್ಟಪುರ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.