ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಸಭೆಲ್ಲಿ ಈ ಕುರಿತು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಬಳಕೆ ಮಾಡಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ದೇಶದ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣ ಗೌರವಿಸುತ್ತಾರೆ. ಸೋಶಿಯಲ್ ಮೀಡಿಯಾದಿಂದಲೇ ಜನರಿಗೆ ಅಧಿಕಾರ ಸಿಕ್ಕಂತಾಗಿದೆ. ಇಂದಿನ ದಿನಗಳಲ್ಲಿ ಇದರ ಪಾತ್ರ ಬಹುದೊಡ್ಡದಿದೆ. ಹೀಗಾಗಿ ಇದನ್ನು ಯಾರೂ ಸಮಾಜ ವಿರೋಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ.
