ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಕಳ್ಳತನದ ಆರೋಪಿ ಹಸನಸಾಬ್‌ ಕಾಶೀಮಸಾಬ್‌ ಬೇಗ್‌ ಎಂಬ ವ್ಯಕ್ತಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಬರೋಬ್ಬರಿ 7 ವರ್ಷಗಳ ಹಿಂದೆ ಧಾರವಾಡದ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಮಂಗಳವಾರ ಪೇಟೆಯ ಉಮೇಶ ಮಹೇಂದ್ರಕರ್ ಎಂಬುವವರ ಮನೆಯಲ್ಲಿ ಚಿನ್ನಾಭರಣ, ಬೆಲೆಬಾಳುವ ಸಾಮಾಗ್ರಿ ಹಾಗೂ ಸಂಗಮ್ ಸರ್ಕಲ್ ಹತ್ತಿರದ ಕ್ಷೇತ್ರಿಯ ಮೊಬೈಲ್ ಅಂಗಡಿಯಲ್ಲಿ ಮೊಬೈಲ್‌, ನಗದು ಕಳ್ಳತನ ಮಾಡಿದ್ದ. ಪೊಲೀಸರು ಈ ವ್ಯಕ್ತಿಯನ್ನು ಬಂಧಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 2ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶ ಆಚಪ್ಪ ದೊಡ್ಡ ಬಸವರಾಜ ಅವರು, ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ, ಪ್ರಕರಣದ ದೂರುದಾರರಿಗೆ ರೂ. 2 ಸಾವಿರ ಪರಿಹಾರ ನೀಡಬೇಕೆಂದು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಗೀತಾ ಹೊಸಗಾಣಿಗೇರ ವಾದಿಸಿದ್ದರು. 

Leave a Reply

Your email address will not be published. Required fields are marked *

You May Also Like

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೋಂಕು: ಇಂದು 4120 ಪಾಸಿಟಿವ್ , ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಕಣ್ಮನ ಸೆಳೆದ ಗೊಂಬೆಗಳ ಕುಣಿತ- ಗಣೇಶ ವಿಸರ್ಜನೆ ರಂಗು…!

ವರದಿ: ಗುಲಾಬಚಂದ ಜಾಧವ ಉತ್ತರಪ್ರಭ ಸುದ್ದಿಆಲಮಟ್ಟಿ: ಬ್ರಹತ್ತಾಕಾರದ ರಂಗು ರಂಗಿನ ಗೊಂಬೆಗಳ ನಲಿದಾಟ. ಹಲಿಗೆ ವಾದ್ಯ…