ಜೈಪುರ : ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಆನದ ಹನುಮಾನ್ ನಗರ ಜಿಲ್ಲೆಯಲ್ಲಿ ನಡೆದಿದೆ. 

ಈ ಕಾರಿನಲ್ಲಿ ದಂಪತಿ ಸೇರಿದಂತೆ ಅವರ ಮಗಳು ಹಾಗೂ ಸಂಬಂಧಿಕರು ಸಿಕಾರ್ ನಿಂದ ರಾವತ್ಸರ್ ಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ವಿನೋದ್ ಕುಮಾರ್(45), ಪತ್ನಿ ರೇಣು(42) ಹಾಗೂ 15 ವರ್ಷದ ಮಗಳು ಮತ್ತು ಅವರ ಸಂಬಂಧಿಕರಾದ ಸುನೀತ ಭತಿ(40) ಎಂದು ಗುರುತಿಸಲಾಗಿದೆ. 

ಕುಟುಂಬದ ಸ್ನೇಹಿತ ರಮೇಶ್ ಕುಮಾರ್ ಎಂಬುವವರು ಕಾರು ಚಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ರಸ್ತೆ ಮಧ್ಯೆ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾರೆ. ಆದರೆ, ಹ್ಯಾಂಡ್ ಬ್ರೇಕ್ ಹಾಕುವುದನ್ನು ಮರೆತು ಹೋಗಿದ್ದಾರೆ. ಹೀಗಾಗಿ ಕಾರು ಉರುಳಿ ಇಂದಿರಾಗಾಂಧಿ ಕಾಲುವೆಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ದಿಗ್ವಿಜಯ್ ಸಿಂಗ್ ನಕಲಿ ಟ್ವೀಟರ್ ರಚನೆ: ದೂರು ನೀಡಿದ ಕೈ ನಾಯಕ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಹೆಸರಿನಲ್ಲಿ ನಕಲಿ ಟ್ವೀಟರ್…

ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ!

ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ…

2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆ

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ರವಿವಾರ ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿಯೂ ಯಾವುದೇ ಅಧಿಕೃತ ಸಮಾರಂಭ ನಡೆಯದೇ, ವರ್ಚುವಲ್ ಆಗಿ ಪ್ರಶಸ್ತಿ ವಿಜೇತ ನಟ, ನಟಿ ಹಾಗೂ ಚಿತ್ರಗಳನ್ನು ಘೋಷಿಸಲಾಗಿದೆ.

ಅಮೆರಿಕದಲ್ಲಿ ವೇದ ಮಂತ್ರ ಪಠಣ!

ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.