ಬೆಂಗಳೂರು:
ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೇಳೆ ಮುಂಚೂಣಿಯಲ್ಲಿ ನಿಂತು ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಗೌರವ ಧನ ಹೆಚ್ಚಿಸುವ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.
ಇನ್ನು ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರು, ಹಸುಗೂಸುಗಳ ಮರಣ ತಪ್ಪಿಸಲು ಪೌಷ್ಠಿಕಾಂಶಯುಕ್ತ ಅಹಾರ ಒದಗಿಸಲು ಹೊಸ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಸ್ವಸಹಾಯ ಗುಂಪುಗಳಿಗೆ ಅನುಕೂಲವಾಗುವಂತ ಕಾರ್ಯಕ್ರಮ ರೂಪಿಸಲು ಮನವಿ ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಲಕ್ಷ್ಮೇಶ್ವರದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿದ ಸುನೀಲ್ ಮಹಾಂತಶೆಟ್ಟರ್

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ ಹೇಳಿದರು.