ಬೆಂಗಳೂರು : ಶಾಲಾ ಶುಲ್ಕಕ್ಕೆ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಇಲ್ಲಿಯ ಕೋರಮಂಗಲದ ಜಕ್ಕಸಂದ್ರದಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜಯಂತ್ ಮನೆಗೆ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಯೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಫೀಸ್ ಗಾಗಿ ವಿದ್ಯಾರ್ಥಿಗೆ ಕಿರುಕುಳ ನೀಡಿದ ರವೀಂದ್ರ ಭಾರತಿ ಗ್ಲೋಬಲ್ ಶಾಲೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸೋಮಸುಂದರ ಪಾಳ್ಯದ ರವೀಂದ್ರ ಭಾರತಿ ಗ್ಲೋಬಲ್ ಶಾಲೆ ಆಡಳಿತ ಮಂಡಳಿಯಲ್ಲಿ ಜಯಂತ್ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ. ಆದರೆ, ಫೀಸ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಆಡಳಿತ ಮಂಡಳಿ, ಪರೀಕ್ಷೆ ಬರೆಯುತ್ತಿದ್ದ ಜಯಂತ್ ನನ್ನು ಶಾಲೆಯಿಂದ ಅರ್ಧಕ್ಕೆ ಹೊರ ಹಾಕಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವಿಷಯ ಭಾರಿ ಚರ್ಚೆಯಾಗಿತ್ತು. ಅಲ್ಲದೇ, ಪಾಲಕರು ಶಾಲೆಯ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದಾದ್ಯಂತ ಕೂಡ ಈ ವಿಷಯವಾಗಿ ಸಾಕಷ್ಟು ಚರ್ಚೆಗಳಾಗಿ ಆಕ್ರೋಶ ವ್ಯಕ್ತವಾಗಿತ್ತು. ಇವುಗಳಿಗೆ ಕಡಿವಾಣ ಹಾಕಬೇಕೆಂದು ಪಾಲಕರು ಸರ್ಕಾರಕ್ಕ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಇಂತಹ ಆಡಳಿತ ಮಂಡಳಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ತುರ್ತು ವಾಹನ ಸೇವೆ ಒದಗಿಸಿ ಜನರಿಂದ ಸೈ ಎನಿಸಿಕೊಂಡ ಗ್ರಾಪಂ ಸದಸ್ಯ ಜಹೀರ್

ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಜನಸಾಮಾನ್ಯರ ಬದುಕು ತೀರಾ ಸಂಕಷ್ಟಕ್ಕೀಡಾಗಿದೆ. ಇಂತಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸೇವಾ ಕಾರ್ಯಕ್ಕೆ ಅಣಿಯಾಗಿದ್ದಾರೆ. ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ಜಹೀರುದ್ದೀನ್ ಮುಲ್ಲಾ, ಗ್ರಾಮದಲ್ಲಿ ಉಚಿತ ತುರ್ತು ಸೇವಾ ವಾಹನದ ವ್ಯವಸ್ಥೆಯನ್ನು ಮಾಡಿದ್ದಾರೆ.

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ನಮ್ಮ ಕರವೇ ಗ್ರಾಮ ಘಟಕ ಉದ್ಘಾಟನೆ

ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ‌ ಕರವೇ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.