ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಿಕ್ಕ ಭರ್ಜರಿ ಗಿಫ್ಟ್!

ನವದೆಹಲಿ :  ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.

ರಾಜ್ಯಸಭೆಯ ವಿಪಕ್ಷ ನಾಯಕರನ್ನಾಗಿ ಖರ್ಗೆ ಅವರನ್ನು ಆಯ್ಕೆ ಮಾಡಿದೆ. ಈ ಕುರಿತು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. 

ಇಲ್ಲಿಯವರೆಗೆ ವಿಪಕ್ಷ ನಾಯಕರಾಗಿದ್ದ ಗುಲಾಂನಬಿ ಆಜಾದ್ ಅವರ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಸದ್ಯ ರಾಜ್ಯಸಭೆಯಲ್ಲಿ ಕೂಡ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ.

Exit mobile version