ಆಂಧ್ರಪ್ರದೇಶ: ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ವಲಯದ ಮದಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಲಾರಿ ಡಿಕ್ಕಿ ಹೊಡೆದಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲಾರಿ, ಮಿನಿ ಬಸ್ ಮಧ್ಯೆ ಡಿಕ್ಕಿ: 14 ಜನ ದುರ್ಮರಣ
ಆಂಧ್ರಪ್ರದೇಶ: ಲಾರಿ ಮತ್ತು ಮಿನಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ 14 ಜನ ಮೃತಪಟ್ಟಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ವೆಲ್ದುರ್ತಿ ಬಳಿಯ ಮಾದಾಪುರಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ಮದನಪಲ್ಲಿ ನಿವಾಸಿಗಳು. ಅಪಘಾತದಲ್ಲಿ ಒಂದು ಮಗು, 8 ಮಹಿಳೆಯರು ಸೇರಿ 14 ಜನ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ವಲಯದ ಮದಪುರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಲಾರಿ ಡಿಕ್ಕಿ ಹೊಡೆದಿದೆ. ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿ ಒಟ್ಟು 18 ಪ್ರಯಾಣಿಕರಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ!

ನವದೆಹಲಿ: ಅಂಫಾನ್ ಚಂಡಮಾರುತಕ್ಕೆ ಕಂಗಾಲಾಗಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಪರಿಸ್ಥಿತಿ…

ಇಂದು ಐಶ್ವರ್ಯ ರೈ, ಮಗಳು ಆರಾಧ್ಯಳಿಗೂ ಸೋಂಕು ದೃಢ

ಮುಂಬೈ: ಶನಿವಾರ ರಾತ್ರಿ ಹಿರಿಯ ನಟ ಅಮಿತಾಬ್ ಬಚ್ಚನ್ ತಮಗೆ ಸೋಂಕುದೃಢ ಪಟ್ಟ ಕುರಿತು ಟ್ವೀಟ್ ಮಾಡಿದ್ದರು. ಕನ್ನಡತಿ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯಳಿಗೂ ಪಾಸಿಟಿವ್

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.

ಕಾಲುವೆಗೆ ಉರುಳಿ ಬಿದ್ದ ಬಸ್ಸು: 32 ಜನ ದುರ್ಮರಣ

ರಾಜ್ಯ ರಾಜಧಾನಿ ಭೋಪಾಲ್‌ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಮುಳುಗಿದ ಶಂಕೆ ಇದೆ.