ಮಧ್ಯಪ್ರದೇಶ: ರಾಜ್ಯ ರಾಜಧಾನಿ ಭೋಪಾಲ್‌ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಮುಳುಗಿದ ಶಂಕೆ ಇದೆ.
ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು. ಅಪಘಾತ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಬೇಕಾದ ಪ್ರಮುಖ ಕಾರ್ಯಕ್ರಮವೊಂದನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಈ ಘಟನೆ ನಡೆದದ್ದು ಅತ್ಯಂತ ವಿಷಾದನೀಯ ಈಗಾಗಲೇ ರಕ್ಷಣಾ ಕಾರ್ಯ ನಡೆಯುತ್ತಿದೆ. ಇಬ್ಬರು ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇಡೀ ರಾಜ್ಯವು ಸಂತ್ರಸ್ತರೊದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.