ಅಹಮದಾಬಾದ್: ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಗೋಧ್ರಾ ಪೊಲೀಸರ ತಂಡ, ರೈಲ್ವೆ ನಿಲ್ದಾಣ ಬಳಿಯ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿ ಮನೆಯೊಂದರಲ್ಲಿದ್ದ ಭಾತುಕ್ನನ್ನು ಬಂಧಿಸಿತು. ಈತ ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ವ್ಯವಸ್ಥೆ ಮಾಡಿದ್ದ ಮತ್ತು ಗಲಭೆಗೂ ಪ್ರಚೋದನೆ ನೀಡಿದ್ದ. ತನಿಖೆ ಸಂದರ್ಭದಲ್ಲಿ ಈತನ ಹೆಸರು ಕಾಣಿಸಿಕೊಂಡ ತಕ್ಷಣ ದೆಹಲಿಗೆ ಪರಾರಿಯಾಗಿದ್ದ.

ಈತನ ವಿರುದ್ಧ ಕೊಲೆ ಮತ್ತು ಗಲಭೆ ಸೃಷ್ಟಿಸಿದ ಆರೋಪಗಳನ್ನು ಹೊರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

2002 ಫೆಬ್ರುವರಿ 27ರಂದು ರೈಲಿಗೆ ಬೆಂಕಿ ಹಚ್ಚಿದ್ದರಿಂದ 59 ಮಂದಿ ಕರಸೇವಕರು ಸಜೀವ ದಹನವಾಗಿದ್ದರು. ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ಭಾತುಕ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪೆಟ್ರೋಲ್ ಸುರಿದಿದ್ದ. ಬಳಿಕ ಇತರ ಆರೋಪಿಗಳು ಬೆಂಕಿ ಹಚ್ಚಿದ್ದರು. ಗೋಧ್ರಾದಿಂದ ಪರಾರಿಯಾದ ಮೇಲೆ ದೆಹಲಿಯಲ್ಲಿ ಈತ ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಕಟ್ಟಡ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದ ಎಂದು ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನೀಟ್ (NEET) ಪರೀಕ್ಷೆಯ ದಿನಾಂಕ ಘೋಷಣೆ!

ಈ ಪರೀಕ್ಷೆಯು ದೇಶದಾದ್ಯಂತ ನಡೆಯಲಿದ್ದು ಕೋವಿಡ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಹಾಗೂ ಈ ಮುಂಚೆ 155 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈಗ 198 ನಗರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಹಾಗೂ 3862 ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40,263ಕ್ಕೆ ಏರಿಕೆ..!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ.

ಮೋದಿ ಸಭೆಗೆ ಹಾಜರಾಗದ ದೀದಿ!

ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,…

ಈ ನಟಿಗೆ ಸಹಾಯ ಮಾಡಿದ ಮೇಕಪ್ ಮ್ಯಾನ್!

ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.