ಮಂಗಳೂರಿಗೆ: ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.
ನಗರದ ಜಪ್ಪಿನಮೊಗರು ವ್ಯಾಪ್ತಿಯಲ್ಲಿರುವ ಎರಡು ಎಕರೆ ನಿವೇಶನದಲ್ಲಿ ಈ ಸಂಬಂಧ ವ್ಯವಸ್ಥೆ ಕಲ್ಪಿಸಲು ಉದ್ದೇಶಕ್ಕೆ ಮುಂದಾಗಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರ ಇದಕ್ಕೆ ನೆರವು ನೀಡುವ ನಿರೀಕ್ಷೆಯಿದೆ.
ಸದ್ಯ ವಲಸೆ ಕಾರ್ಮಿಕರು ನಗರದ ವಿವಿಧ ಭಾಗಗಳಲ್ಲಿ ಬಾಡಿಗೆ ಆಧಾರಿತವಾಗಿ ವಾಸವಾಗಿದ್ದಾರೆ. ಇನ್ನು ಹಲವು ಮಂದಿ ಟೆಂಟ್ ಹಾಕಿ ಬೀದಿ ಬದಿಯಲ್ಲಿ, ಕೆಲಸ ಮಾಡುವ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಇನ್ನು ಕೆಲವರಿಗೆ ಬಸ್ನಿಲ್ದಾಣ, ರೈಲು ನಿಲ್ದಾಣವೇ ಆಶ್ರಯದಾಣವಾಗಿದೆ. ಇಂತಹ ವಲಸೆ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ನೀಡುವುದು ಸರಕಾರದ ಉದ್ದೇಶವಾಗಿದೆ.