ಬೆಂಗಳೂರು: ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದಿಢೀರ್‌ ದೆಹಲಿ ಭೇಟಿಗೆ ಮುಂದಾಗಿದ್ದಾರೆ.

ಇಂದು ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 4 ಗಂಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೇ, ಇಂದು ಅವರು ದೆಹಲಿಯಲ್ಲಿಯೇ ಉಳಿದು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸದ್ಯ ರಾಜ್ಯದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿವೆ. ನಿಟ್ಟಿನಲ್ಲಿ ಅವರು ಚರ್ಚಿಸಲು ದೆಹಲಿಗೆ ತೆರಳಬಹುದು ಎನ್ನಲಾಗುತ್ತಿದೆ.

      ಕುರುಬ ಸಮುದಾಯದವರ ಹೋರಾಟ ಕೂಡ ನಡೆಯುತ್ತಿದೆ. ಕುರುಬರಿಗೆ ಎಸ್ಟಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಕೆ.ಎಸ್.ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೂ ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ಇದೇ ಹೋರಾಟವನ್ನು ಅಸ್ತçವಾಗಿ ಬಳಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.

ಕೊರೊನಾ ಬಂದ ಸಂದರ್ಭದಿಂದಲೂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರಲಿಲ್ಲ. ರಾಹುಲ್ ಗಾಂಧಿ ಅವರು ಡಿಕೆಶಿ ಅವರ ಮಗಳ ಆರತಕ್ಷತೆ ಬರಲಿದ್ದು, ಅವರು ಬೆಂಗಳೂರಿಗೆ ಬರುವ ಮೊದಲೇ ಸಿದ್ದರಾಮಯ್ಯ ಅವರು ಭೇಟಿಗೆ ತೆರಳಿದ್ದು, ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

You May Also Like

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

ಗದಗ ಜಿಲ್ಲೆ ರೈತರಿಗೆ ಉಪಯುಕ್ತ ಮಾಹಿತಿ: ಮೊಬೈಲ್ ನಲ್ಲೆ ಸಿಗಲಿದೆ ಮಳೆ, ಬೆಳೆ ವಿವರ

ಗದಗ: ಕೃಷಿ ಹಾಗೂ ಹವಾಮಾನ ಸಂಬಂಧಿತ ಆ್ಯಪ್‌ಗಳುಇತ್ತೀಚಿಗೆ ಹವಾಮಾನ ವೈಪರೀತ್ಯದಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿದೆ. ಬರ,…

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.