ತ್ಯಾವಣಿಗೆ (ಚನ್ನಗಿರಿ): ಅರೇಹಳ್ಳಿ ಗ್ರಾಮದ ಗೋಮಾಳ ಜಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಂತ ಸೇವಾಲಾಲ್ ದೇವಸ್ಥಾನದ ಅಡಿಪಾಯವನ್ನು ಕೆಡವಿಹಾಕಿದ್ದರಿಂದ ಬಂಜಾರ ಹಾಗೂ ಇನ್ನಿತರ ಸಮುದಾಯಗಳ ನಡುವೆ ನಡೆದ ಘರ್ಷಣೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಅರೇಹಳ್ಳಿ ಗ್ರಾಮದಲ್ಲಿ ಸಂತ ಸೇವಾಲಾಲ್ ದೇವಸ್ಥಾನ ಮತ್ತು ಕುಕ್ಕುವಾಡೇಶ್ವರಿ ದೇವಾಲಯಗಳ ಭಕ್ತರ ನಡುವೆ ಮಂಗಳವಾರ ವಾಗ್ವಾದ ನಡೆದಿದೆ.

ಸೇವಾಲಾಲ್ ದೇವಸ್ಥಾನದ ಅಡಿಪಾಯವನ್ನು ಒಂದು ಗುಂಪಿನವರು ಕೆಡವಿ ಹಾಕಿದ್ದು, ದೇವಸ್ಥಾನದ ಗರ್ಭಗಡಿಯಲ್ಲಿ ಕಸದ ತೊಟ್ಟಿ ಇಟ್ಟು ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಂತ ಸೇವಾಲಾಲ್ ಭಕ್ತರು ಈ ಜಾಗದಲ್ಲಿ ಪ್ರತಿಮೆ ಸೃಷ್ಟಿಸಿ ಅರಿಶಿಣ ಕುಂಕುಮ ಲೇಪಿಸಿ ಪೂಜೆ ಸಲ್ಲಿಸಿದ್ದಾರೆ. ಅಲ್ಲಿ ಪೂಜೆ ಮಾಡುತ್ತಿದ್ದೇವೆಯೇ ಹೊರತು ಕಟ್ಟಡ ನಿರ್ಮಿಸುತ್ತಿರಲಿಲ್ಲ  ಎಂಬುದು ಸೇವಾಲಾಲರ  ಭಕ್ತರವಾದ. ಗ್ರಾಮದಲ್ಲಿ ಸೇವಾಲಾಲ್ ಅವರ ಒಂದು ದೇವಸ್ಥಾನವಿದೆ. ಹೀಗಿದ್ದರೂ ಇನ್ನೊಂದು ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂಬುದು ಇನ್ನೊಂದು ಗುಂಪಿನವರ ವಾದವಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್‌ಪಿ ಪ್ರಶಾಂತ್ ಮನ್ನೋಳಿ, ಸಿಪಿಐ ಆರ್.ಆರ್.ಪಾಟೀಲ್, ಚನ್ನಗಿರಿ ತಹಶೀಲ್ದಾರ್ ಎನ್.ಜೆ.ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

Leave a Reply

Your email address will not be published. Required fields are marked *

You May Also Like

ಪ್ರಕಾಶ್ ಜಾವ್ಡೇಕರ್ ಜೊತೆ ಬಿ.ಎಸ್.ವೈ ವಿಡಿಯೋ ಸಂವಾದ

ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಿಗರಿಗೆ ವಿಶೇಷ ಗಿಫ್ಟ್ ನೀಡಿದ ಆರ್ ಸಿಬಿ ತಂಡ!

ದುಬೈ : ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…

ದೇವಿ ಪುರಾಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ

ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.