ದೆಹಲಿ: ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶಾದ್ಯಂತ ರೈಲು ತಡೆಗೆ ಕರೆ ನೀಡಿದ್ದು, ಈ ಕರೆಗೆ ಓಗೊಟ್ಟು ರಾಜ್ಯ ರೈತ ಸಂಘಟನೆಗಳು ರಾಜ್ಯದಾದ್ಯಂತ ರೈಲು ತಡೆ ಚಳವಳ ನಡೆಸಲಿದ್ದಾ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ದೆಹಲಿ ರೈತ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ರೈತ ಚಳುವಳಿಯ ಹತ್ತಿಕ್ಕುವ ಪ್ರಯತ್ನಕೆ ಹೆಚ್ಚು ಒತ್ತು ನೀಡುತ್ತಿದೆ.

ನಾಟಕೀಯವಾಗಿ ವರ್ತಿಸುತ್ತಿದೆ ಇದನ್ನು ಖಂಡಿಸಿ ದೇಶಾದ್ಯಂತ ಫೆಬ್ರವರಿ 18 ರಂದು ಮಧ್ಯಾಹ್ನ 12 ರಿಂದ 3ರ ವರೆಗೆ ರೈಲು ತಡೆ ಚಳವಳಿ ನಡೆಸಲು ಕರೆ ನೀಡಿರುವುದನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದಿಂದ ಚಳವಳಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ದೇಶದಲ್ಲಿ ಅನಧಿಕೃತ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆ ಕಾಣುತ್ತಿದೆ, ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶ ರಂಜನ್ ಗೊಗಾಯ್ ಬಡಜನರಿಗೆ ದುಡಿಯುವ ವರ್ಗಕ್ಕೆ ನ್ಯಾಯಾಲಯಗಳಲ್ಲಿ ನ್ಯಾಯ ಸಿಗುವುದು ಕಷ್ಟಕರವಾಗಿದೆ ಎನ್ನುತ್ತಾರೆ.

ಪ್ರಜಾಪ್ರಭುತ್ವ ಅಪಾಯಕಾರಿ ಪರಿಸ್ಥಿತಿಯಲ್ಲಿ ಸಾಗುತ್ತಿದೆ. ಬಂಡವಾಳಶಾಹಿಗಳ ಶ್ರೀಮಂತರ ವಶಕ್ಕೆ ಸಿಲುಕುತ್ತಿದೆ. ಇಂಥ ವಿಚಾರಗಳ ಬಗ್ಗೆ ಪ್ರತಿಯೊಬ್ಬರು ಚಿಂತಿಸಬೇಕಾಗಿದೆ. ಕೇಂದ್ರ ಸರ್ಕಾರ ಎಮ್ಮೆ ಚರ್ಮದ ಸರ್ಕಾರ. ಮಳೆ ಚಳಿ ಗಾಳಿ ಬಿಸಿಲು ಯಾವುದಕ್ಕೂ ಪ್ರತಿಕ್ರಿಯೆ ಇಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರೈತ ಉತ್ಪನ್ನಗಳಿಗೆ ಕನಿಷ್ಠ ಶಾಸನಬದ್ಧ ಬೆಲೆ ಖಾತ್ರಿಗೊಳಿಸಿದ ಸರ್ಕಾರ. ಕೃಷಿ ಉತ್ಪನ್ನ ಖರೀದಿಸಲು ಯಾವುದೇ ನಿಯಂತ್ರಣವಿಲ್ಲದ ರಹದಾರಿ ಇಲ್ಲದವರು. ಎಷ್ಟು ಬೇಕಾದರೂ ಎಲ್ಲಿ ಬೇಕಾದರೂ ಖರೀದಿಸಬಹುದು ಎನ್ನುವ ವ್ಯಾಪಾರಕ್ಕೆ ಕಾನೂನು ಮೂಲಕ ಖಾಸಗಿಯವರಿಗೆ ಅವಕಾಶ ಕೊಡಲಾಗಿದೆ. ಯಾವುದೇ ಅನುಮತಿ ಇಲ್ಲದವರು ವ್ಯಾಪಾರ ಮಾಡುವಾಗ ರೈತರಿಗೆ ವಂಚನೆ ಮಾಡಿದ್ದಾಗ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ನ್ಯಾಯಾಲಯಕ್ಕೆ ಹೋಗುವುದನ್ನು ಕಿತ್ತು ಹಾಕಲಾಗಿದೆ. ಇದೆಲ್ಲಾ ಜನಪ್ರತಿನಿಧಿಗಳಿಗೆ ಯಾಕೆ ಅರ್ಥವಾಗುತ್ತಿಲ್ಲ, ರಾಜ್ಯ ಸರ್ಕಾರ ಮಂಡಿಸುವ ಮುಂದಿನ ಬಜೆಟ್ನಲ್ಲಿ ಕಬ್ಬಿನ ಎಫ್ಆರ್ ಪಿ ಬೆಲೆಯನ್ನು ರೈತರ ಹೊಲದಲ್ಲಿನ ದರ ಎಂದು ರಾಜ್ಯಸರ್ಕಾರವೇ ನಿಗದಿ ಮಾಡುವಂತಾಗಬೇಕು. ಕಬ್ಬಿಗೆ ಫಸಲ್ ಭೀಮಾ ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕು. ಹಣ್ಣು-ತರಕಾರಿ ಎಲ್ಲ ಬೆಳೆಗಳಿಗೆ ಶಾಸನಬದ್ಧ ಖಾತ್ರಿ ಕನಿಷ್ಠ ಬೆಂಬಲ ಬೆಲೆ ನಿಗದಿಮಾಡುವ ಮಾನದಂಡ ಜಾರಿಗೆ ಬರಬೇಕು. ಕೇರಳ ರಾಜ್ಯದ ಮಾದರಿಯಲ್ಲಿ ರಾಜ್ಯದಲ್ಲಿ, ಆರು ತಿಂಗಳಿಗೊಮ್ಮೆ ಸಕ್ಕರೆ ಸಚಿವರು, ಸಕ್ಕರೆ ಅಭಿವೃದ್ಧಿ ಆಯುಕ್ತರು ಬದಲಾಗುತ್ತಿರುವುದು ಕಬ್ಬು ಬೆಳೆಗಾರರ ಸಮಸ್ಯೆಗಳು ಏರಿಕೆಯಾಗಲು ಹಾಗೂ ಪರಿಹಾರ ಸಿಗಲು ಕಷ್ಟವಾಗುತ್ತಿದೆ. ಕಬ್ಬು ಬೆಳೆಗಾರರಿಗೆ 4 ಸಾವಿರ ಕೋಟಿ ಕಬ್ಬಿನ ಹಣ ಬಾಕಿ ಬರಬೇಕಾಗಿದೆ. ಇದನ್ನು ಕೊಡಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.

ಜಗತ್ತಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 2.33 ಲಕ್ಷ

ಲಂಡನ್ : ಜಗತ್ತಿನಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಈ ಮಹಾಮಾರಿಗೆ 2.33 ಲಕ್ಷ ಜನ ಬಲಿಯಾಗಿದ್ದಾರೆ.…

ಮಹಿಳಾ ಸಚಿವೆ ಕುರಿತು ಹೇಳಿದ ಹೇಳಿಕೆಗೆ ಮಾಜಿ ಸಿಎಂ ಹೇಳಿದ್ದೇನು?

ಭೋಪಾಲ್ : ಬಿಜೆಪಿ ಜನರು, ಮತದಾರರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೆ ಮಾಜಿ ಸಿಎಂ ಕಮಲ್ ನಾಥ್ ಪತ್ರ ಬರೆದಿದ್ದಾರೆ.

ನಡಕಟ್ಟಿನ ಕೂರಿಗೆ ಸಂಶೋಧನೆಗೆ ಪದ್ಮಶ್ರೀ ಪ್ರಶಸ್ತಿಯ ಗರಿ

ಧಾರವಾಡ: ಬಿತ್ತುವ ಕೂರಿಗೆ ತಜ್ಞ ಅಬ್ದುಲ್‌ ಖಾದರ್ ನಡಕಟ್ಟಿನ ಗೆ ಪದ್ಮಶ್ರೀ ಪ್ರಶಸ್ತಿಯ ಗರಿ ಹೌದು…