ಚೆನ್ನೈ: ಭಾರತ ಕ್ರಿಕೆಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

ಮಂಗಳವಾರ ಇಂಗ್ಲೇಂಡ್ ಎದುರು ಜಯಕಂಡ ನಂತರ ವಿರಾಟ್ ಕೊಹ್ಲಿ ಬಳಗವು ಡಬ್ಲುಟಿಸಿ ಫೈನಲ್‌ಗೆ ಮತ್ತಷ್ಟು ಸನಿಹ ಸಾಗಿದೆ. ಶೇಕಡಾವಾರು ಪಾಯಿಂಟ್ಸ್ (ಪಿಸಿಟಿ)ನಲ್ಲಿ ಭಾರತವು 69.7 ಅಂಕ ಗಳಿಸಿದೆ. ಒಟ್ಟು 460 ಅಂಕಗಳು ಖಾತೆಯಲ್ಲಿವೆ.

ಶೇ 70 ಪಿಸಿಟಿ ಇರುವ ನ್ಯೂಜಿಲೆಂಡ್ ಈಗಾಗಲೇ ಫೈನಲ್ ಅರ್ಹತೆ ಗಿಟ್ಟಿಸಿದೆ. ಇನ್ನುಳಿದಿರುವ ಎರಡು ಪಂದ್ಯಗಳಲ್ಲಿ ಕನಿಷ್ಠ ಒಂದರಲ್ಲಿ ಜಯಿಸಬೇಕು. ಯಾವ ಪಂದ್ಯವನ್ನೂ ಸೋಲಬಾರದು. ಆಗ ಫೈನಲ್ ದಾರಿಯು ಸುಗಮವಾಗುತ್ತದೆ.

ಚೆನ್ನೈನಲ್ಲಿ ನಡೆದಿದ್ದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಸೋತಿತ್ತು. ಆಗ ಎರಡನೇ ಸ್ಥಾನಕ್ಕೆ ಜಿಗಿದಿದ್ದ ಇಂಗ್ಲೆಂಡ್ (ಶೇ 67.0) ಮತ್ತೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ (69.2) ಮೂರನೇ ಸ್ಥಾನದಲ್ಲಿದೆ.

Leave a Reply

Your email address will not be published. Required fields are marked *

You May Also Like

ಹಸಿವು ತಾಳದೆ ಸತ್ತ ನಾಯಿಯನ್ನೇ ತಿಂದ ವ್ಯಕ್ತಿ!

ಹಸಿವು ತಾಳಲಾರದೆ ವ್ಯಕ್ತಿಯೋರ್ವ ರಸ್ತೆಯಲ್ಲಿ ಅಪಘಾತವಾಗಿ ಸತ್ತು ಬಿದ್ದಿದ್ದ ನಾಯಿಯನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ.

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…

ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…