ದಾವಣಗೆರೆ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಶಾಮನೂರು ಒಡೆತನದ ದಾವಣಗೆರೆಯ ಮೂರು ಕಾಲೇಜುಗಳಲ್ಲಿ ಅಧಿಕಾರಿಗಳಿಂದ ಕಡತ ಪರಿಶೀಲಸಲಾಗಿದೆ. ಆರು ಜನ ಐಟಿ ಅಧಿಕಾರಿಗಳ ತಂಡ ದಾವಣಗೆರೆ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್ ಗಳಲ್ಲಿ ದಾಳಿ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರವೇಶ ಹಾಗೂ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಲ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ವಾಗಿ ಭೇಟಿ ಮಾಡಿ ಶುಲ್ಕ ತುಂಬದ ವಿವರವನ್ನು  ಅಧಿಕಾರಿಗಳು ಪಡೆಯುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯಿಂದ ಬಂದ ಐಟಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ.

Leave a Reply

Your email address will not be published. Required fields are marked *

You May Also Like

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನ ಶ್ರೀರಕ್ಷೆ ಇದೆ – ಹೊರಟ್ಟಿ!

ಚಿಕ್ಕಬಳ್ಳಾಪುರ : ಬಿಜೆಪಿಯ ಹೈಕಮಾಂಡ್ ತಮ್ಮ ಅಭಿಪ್ರಾಯವನ್ನು ಯತ್ನಾಳ್ ಅವರ ಮೂಲಕ ಹೇಳಿಸುತ್ತಿದೆ ಎಂದು ಶಾಸಕ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.