ಬೆಂಗಳುರು: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ ಅಧಿಕಾರ ರಾಮ ಜಪ ಕಾಲು ಭಾಗಕ್ಕೂ ಸಾಲದು ಎಂದು ತಮ್ಮ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.

ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ. ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ. ಅದರ ಫಲವನ್ನೂ ಉಣ್ಣಲಿ, ಎಂದಿದ್ದಾರೆ.

ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ. ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ, ಅಧಿಕಾರ, ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ, ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ರಾಮಮಂದಿರ ಹಿಂದೂಗಳ ಭಕ್ತಿ, ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ, ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.

ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ

ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಜಾಲಿ ಮೂಡಲ್ಲಿರುವ ದಿಗಂತ್, ಐಂದ್ರಿತಾ!

ಬೆಂಗಳೂರು : ಚಂದನವನದ ಕ್ಯೂಟ್ ಕಪಲ್ ದೂದ್ ಪೇಡಾ ದಿಗಂತ್ ಮತ್ತು ನಟಿ ಐಂದ್ರಿತಾ ರೇ…