ದೆಹಲಿ: ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್ ಭಾರತದಲ್ಲೂ ವಕ್ಕರಿಸಿದೆ. ದಕ್ಷಿಣ ಆಫ್ರಿಕಾದ ವೈರಸ್ ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಸಿಎಂಆರ್ ಡೈರೆಕ್ಟರ್ ಜನರಲ್ ಬಲರಾಮ್ ಭಾರ್ಗವ ಅವರು, ಕಳೆದ ಜನವರಿಯಲ್ಲಿ ಆಫ್ರಿಕಾದಿಂದ ಭಾರತಕ್ಕೆ ಮರಳಿದ ನಾಲ್ವರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಹೇಳಿದರು

ಭಾರತದಲ್ಲಿ, ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಾಲ್ವರಲ್ಲಿ ದಕ್ಷಿಣ ಆಫ್ರಿಕಾದ ಕೋವಿಡ್ -19 ಪತ್ತೆಯಾಗಿದೆ. ಎಲ್ಲಾ ಪ್ರಯಾಣಿಕರು ಹಾಗೂ ಅವರ ಸಂಪರ್ಕಿತರನ್ನು ಪರೀಕ್ಷಿಸಲಾಗಿದೆ ಮತ್ತು ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಅವರು ತಿಳಿಸಿದರು.

ದೇಶದ ಒಬ್ಬ ವ್ಯಕ್ತಿಯಲ್ಲಿ ಬ್ರೆಜಿಲಿಯನ್ ರೂಪಾಂತರಿ ವೈರಸ್ ಸಹ ಪತ್ತೆಯಾಗಿದೆ ಎಂದು ಭಾರ್ಗವ ಅವರು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ಪತ್ತೆಯಾದವರಲ್ಲಿ ಒಬ್ಬರು ಅಂಗೋಲಾದಿಂದ, ಒಬ್ಬರು ಟಾಂಜಾನಿಯಾದಿಂದ ಮತ್ತು ಉಳಿದ ಇಬ್ಬರು ದಕ್ಷಿಣ ಆಫ್ರಿಕಾದಿಂದ ಮರಳಿದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳದ ಹೊರತು ಭಾರತ ಜಗ್ಗುವುದಿಲ್ಲ..

ಲಡಾಖ್‌ನಲ್ಲಿ ಉಭಯ ರಾಷ್ಟ್ರಗಳ ನಡುವೆ ಗಡಿ ಸಮಸ್ಯೆ ಸೃಷ್ಟಿಯಾದ ಬಳಿಕ ಸೇನೆ ನಿಯೋಜಿಸಲಾಗಿದ್ದು, ಇದೀಗ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳದ ಹೊರತು ಭಾರತ ಸೇನಾಪಡೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವುದಿಲ್ಲ ಎಂದು ಸೇನೆ ತಿಳಿಸಿದೆ.

4 ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಮುಂದೇನಾಯ್ತು?

ಲಕ್ನೋ : ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೋವಿಡ್ ಜ್ವರದಿಂದ ಬಳಲುತ್ತಿರುವ ಮಕ್ಕಳು!

ವಾಷಿಂಗ್ಟನ್‍: ಕೊರೊನಾ ವೈರಸ್‍ ಸಂಬಂಧಿತ ಜ್ವರದಿಂದ ಮಕ್ಕಳು ಬಳಲುತ್ತಿರುವ ಪ್ರಕರಣಗಳು ಅಮೆರಿಕದ ಕನಿಷ್ಠ 17 ರಾಜ್ಯಗಳಿಂದ…