ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಗುರುವಾರ ರೈಲ್ ರೋಕೋ ಚಳುವಳಿಯನ್ನು ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.
ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಕಳಸಾ ಬಂಡೂರಿ ರೈತರ ಹೋರಾಟ ಸಮಿತಿ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮುಖಂಡು ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ರೈತರು ಅಕ್ಷರಶಃ ಈ ಕಾಯ್ದೆಯಿಂದ ನಲುಗಿ ಹೋಗಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರಿಗೆ ಅನ್ಯಾಯ ಎಸುಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ರೈತರು 3 ತಿಂಗಳಿನಿAದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದು, ಪ್ರತಿಭಟನಾ ವೇಳೆ ಹಲವರು ಮೃತಪಟ್ಟಿದ್ದಾರೆ. ಆದರೆ, ಪ್ರಧಾನಮಂತ್ರಿ ಅವರು ಜಾನಮೌನ ವಹಿಸಿದ್ದು ಖಂಡನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆಯಲ್ಲಿ ರೈತರು ರೈಲು ನಿಲ್ದಾಣಕ್ಕೆ ನುಗ್ಗುವಂತಹ ಸಂದರ್ಭದಲ್ಲಿ ಪೊಲೀಸರು ತಡೆಯುವ ಪ್ರಯತ್ನ ಮಾಡಿದಾದರೂ, ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದ್ದು ಕಂಡುಬAದಿತು.
ರೈತ ಮುಖಂಡ ಸಿದ್ದಣ್ಣ ತೇಜಿ, ಬಾಬಾಜಾನ್ ಮುಧೋಳ, ಆನಂದ ದಲಬಂಜನ್, ಗೋಪಾಲ್ ಕುಲಕರ್ಣಿ, ಎಂ.ಎಚ್. ಮುಲ್ಲಾ, ರೇಣುಕಾ ಹೊಂಗಲ್ ಮುಂತಾದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.

ಆಸ್ತಿ ಕಲಹ: ಪತ್ನಿ ಎದುರೆ ಪತಿಯ ಹತ್ಯೆ!

ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಪ್ಪತ್ತಗುಡ್ಡ ಸಂರಕ್ಷಣೆಗೆ ಸ್ವಾಮೀಜಿಗಳ ನೇತೃತ್ವದಲ್ಲಿ ಜನಾಂದೋಲನವೇ ಪರಿಹಾರ : ಜಾರಕಿಹೊಳಿ

ಕಪ್ಪತ್ತಗುಡ್ಡ ರಕ್ಷಣೆ ಮಾಡುವ ವಿಚಾರದಲ್ಲಿ ನಮ್ಮ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಈಗೀನ ಬಿ.ಎಸ್.ವೈ ಸರ್ಕಾರ ಗಣಿಗಾರಿಕೆ ಮುಕ್ತ ಮಾಡುವಲ್ಲಿ ಬಹುತೇಕ ಕೆಲಸ ಮುಗಿಸಿದೆ.